ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಹಕಾರಿ ಸಂಘಗಳಿಂದಲೇ ಮಹಿಳೆ ಸ್ವಾವಲಂಬಿ’

Last Updated 15 ನವೆಂಬರ್ 2014, 5:22 IST
ಅಕ್ಷರ ಗಾತ್ರ

ಉಡುಪಿ: ‘ಯುವಜನತೆ ಹಾಗೂ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವಲ್ಲಿ ಸಹಕಾರಿ ಸಂಘಗಳು  ಮಹತ್ವದ ಪಾತ್ರ ನಿರ್ವಹಿಸಿವೆ. ಗ್ರಾಮೀಣ ಪ್ರದೇಶದ ಜನರಿಗೆ ತುಂಬಾ ಅನುಕೂಲಕರ ರೀತಿಯಲ್ಲಿ ಸಾಲ ಸೌಲಭ್ಯ­ವನ್ನು ನೀಡುತ್ತಿದೆ’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸವಿತಾ ಕೋಟ್ಯಾನ್‌ ಹೇಳಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾ­ಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌, ಉಡುಪಿ ಬಡಗಬೆಟ್ಟು ಕ್ರೆಡಿಟ್‌ ಕೋ–ಆಪರೇಟಿವ್‌ ಸೊಸೈಟಿ ಹಾಗೂ ಉಡುಪಿ ಮಹಿಳಾ ಗ್ರಾಹಕರ ವಿವಿದೋದ್ಧೇಶ ಸಹಕಾರ ಸಂಘ ಸಂಯುಕ್ತ ಆಶ್ರಯದಲ್ಲಿ ನಗರದ ಬಡಗಬೆಟ್ಟು ಕ್ರೆಡಿಟ್‌ ಕೋ–ಆಪ ರೇಟಿವ್‌ ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ನಡೆದ ‘61ನೇ ಅಖಿಲ ಭಾರತ ಸಹಕಾರ ಸಪ್ತಾಹ’ ಹಾಗೂ ‘ವೃತ್ತಿ ಕೌಶಲತೆ ಅಭಿವೃದ್ಧಿ ಮತ್ತು ಮಹಿಳಾ ಸಬಲೀಕರಣ, ಯುವಜನ ಮತ್ತು ಅಬಲ ವರ್ಗಗಳ ದಿನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾನ್ಯ ಜನರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯವನ್ನು ಪಡೆಯಲು ಅನೇಕ ದಾಖಲಾತಿಗಳನ್ನು ನೀಡಿ ಹಲವು ಬಾರಿ ಅಲೆದಾಡ­ಬೇಕಾಗುತ್ತದೆ. ಆದರೆ ಸಹಕಾರಿ ಸಂಘ­ಗಳು ಅತೀ ಕಡಿಮೆ ಅವಧಿಯಲ್ಲಿ ಸಾಲ ನೀಡುತ್ತಿವೆ. ಹಾಗೆಯೇ ಠೇವಣಿಯನ್ನು ಸಂಗ್ರಹಿಸಿ, ಜನರಿಗೆ ಉತ್ತಮ ರೀತಿ ಸೇವಾ ಸೌಕರ್ಯ ನೀಡುತ್ತಿವೆ ಎಂದರು.

ಉಡುಪಿ ಜಿಲ್ಲಾ ಸಹಕಾರ ಯೂನಿ­ಯನ್‌ ಅಧ್ಯಕ್ಷ ಕಿಶನ್‌ ಹೆಗ್ಡೆ ಕೊಳ್ಕೆ­ಬೈಲ್‌ ಕಾರ್ಯಕ್ರಮದ ಅಧ್ಯಕ್ಷತೆ­ಯನ್ನು ವಹಿಸಿದ್ದರು. ಉಡುಪಿ ಬಡಗ­ಬೆಟ್ಟು ಕ್ರೆಡಿಟ್‌ ಕೋ–ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ಸಂಜೀವ ಕಾಂಚನ್‌, ಉಡುಪಿ ಮಹಿಳಾ ಗ್ರಾಹ­ಕರ ವಿವಿದೋದ್ಧೇಶ ಸಹಕಾರ ಸಂಘದ ಅಧ್ಯಕ್ಷೆ ಜಯಲಕ್ಷ್ಮೀ ಮಹೇಶ್‌ ಭಂಡಾರಿ, ಜಿಲ್ಲಾ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ    ಉಪ­ನಿರ್ದೇಶಕ ಎಂ.ಎಚ್‌. ವಿಠಲ್‌ ಸೇರಿ­ಗಾರ್‌, ಮಣಿಪಾಲ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸುಜಾತ ಶೆಟ್ಟಿ ಮತ್ತಿತರರು ಉಪ ಸ್ಥಿತರಿದ್ದರು.

ಸಹನಾ ಪ್ರಾರ್ಥಿಸಿ­ದರು, ಅಶೋಕ್‌ ಕುಮಾರ್‌ ಶೆಟ್ಟಿ ಸ್ವಾಗತಿಸಿದರು, ಪ್ರವೀಣ್‌ ಕುಮಾರ್‌ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT