ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸುಪ್ರೀಂ’ಗೆ ಮೂವರು ನ್ಯಾಯಮೂರ್ತಿಗಳು

Last Updated 26 ಜೂನ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಾದ ಅರುಣ್‌ ಮಿಶ್ರಾ, ಆದರ್ಶ ಗೋಯಲ್‌ ಮತ್ತು ಹೆಸರಾಂತ ವಕೀಲ ರೋಹಿಂಟನ್‌ ನಾರಿಮನ್‌ ಅವರನ್ನು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ­ಗಳಾಗಿ ನೇಮಕ ಮಾಡಲಾಗಿದೆ.

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಆಯ್ಕೆ ಸಮಿತಿಯು ಇವರ ಹೆಸರು­ಗಳನ್ನು ಶಿಫಾರಸು ಮಾಡಿತ್ತು. ಶಿಫಾರಸು ಪಟ್ಟಿಯಲ್ಲಿದ್ದ ಮತ್ತೊಬ್ಬ ಹಿರಿಯ ವಕೀಲ ಗೋಪಾಲ್‌ ಸುಬ್ರಮಣಿಯಂ ಅವರು, ಸರ್ಕಾರ ತಮ್ಮಲ್ಲಿ ಲೋಪ ಹುಡುಕಲು ಸಿಬಿಐ ಯನ್ನು ಛೂ ಬಿಟ್ಟಿದೆ ಎಂದು ಆರೋಪಿಸಿ, ತಮ್ಮ ಹೆಸರನ್ನು ಪಟ್ಟಿ­ಯಿಂದ ಕೈಬಿಡುವಂತೆ ಕೋರಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅವರಿಗೆ ಬುಧವಾರ ಪತ್ರ ಬರೆದಿದ್ದರು.

ಅರುಣ್‌ ಮಿಶ್ರಾ ಅವರು ಸದ್ಯ ಕೋಲ್ಕತ್ತ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಮತ್ತು ಗೋಯಲ್‌ ಅವರು ಒಡಿಶಾ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ­ಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸುಪ್ರೀಂ ಕೋರ್ಟ್‌ಗೆ ಜೂನ್‌ 30ರ­ವರೆಗೆ ಬೇಸಿಗೆ ರಜೆ ಇದೆ. ಇದಾದ ನಂತರ ಈ ಮೂವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT