ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹಿಂದಿ- ಅಂತರರಾಷ್ಟ್ರೀಯ ಭಾಷೆ’

Last Updated 22 ಏಪ್ರಿಲ್ 2016, 10:35 IST
ಅಕ್ಷರ ಗಾತ್ರ

ಉಡುಪಿ: ರಾಜಭಾಷೆ, ರಾಷ್ಟ್ರಭಾಷೆ ಮತ್ತು ಸಂಪರ್ಕ ಭಾಷೆಯ ರೂಪದಲ್ಲಿ ತನ್ನ ಸ್ವರೂಪವನ್ನು ವಿಸ್ತರಿಸಿಕೊಳ್ಳು ತ್ತಿರುವ ಹಿಂದಿ ಭಾಷೆಯು, ಇಂದು ವಿದೇಶಗಳಲ್ಲಿ ನೆಲೆಸಿದ (ಅನಿವಾಸಿ) ಭಾರತೀಯರಿಂದಾಗಿ ಅಂತರ ರಾಷ್ಟ್ರೀಯ ಭಾಷೆಯಾಗಿ ರೂಪು ಗೊಂಡಿದೆ ಎಂದು ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಡಾ. ಮಾಧವಿ ಎಸ್‌ ಭಂಡಾರಿ ಅಭಿಪ್ರಾಯಪಟ್ಟರು.

ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಹಿಂದಿ ವಿಭಾಗದ ವತಿಯಿಂದ ಇತ್ತೀಚೆಗೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಹಿಂದಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ವಿಶ್ವದ ಕೆಲವೊಂದು ರಾಷ್ಟ್ರಗಳಲ್ಲಿ ಈಗಾಗಲೇ ಸರ್ಕಾರಿ ಮಟ್ಟದಲ್ಲಿ ಹಿಂದಿ ಭಾಷೆಗೆ ಮಾನ್ಯತೆ ದೊರಕಿದೆ.

ದೇಶದ ಪ್ರಧಾನಿಗಳು ವಿಶ್ವಸಂಸ್ಥೆಯಲ್ಲಿ ಹಿಂದಿಯಲ್ಲಿ ಭಾಷಣ ಮಾಡುವುದರ ಮೂಲಕ ಹಿಂದಿ ಭಾಷೆಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೇರಿಸುವ ಉತ್ತಮ ಕಾರ್ಯವನ್ನು ಮಾಡಿದ್ದಾರೆ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಜಗದೀಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಸುಕನ್ಯಾ ಮಾರ್ಟಿಸ್‌ ಉಪಸ್ಥಿತರಿದ್ದರು. ರವೀನಾ ಸ್ವಾಗತಿಸಿದರು, ನಬೀಲಾ ಬಹುಮಾನ ವಿಜೇತ ಪಟ್ಟಿ ಓದಿದರು, ಸುಗೀತಾ ವಂದಿಸಿದರು, ದೀಕ್ಷಾ ಅಡಿಗ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT