ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹಿಂದೂ ಭಯೋತ್ಪಾದನೆ’: ಕಾಂಗ್ರೆಸ್ ವಿರುದ್ಧ ರಾಜನಾಥ್ ಕಿಡಿ

Last Updated 31 ಜುಲೈ 2015, 11:03 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ‘ಹಿಂದೂ ಭಯೋತ್ಪಾದನೆ’ ಎಂಬ ಪರಿಕಲ್ಪನೆಯನ್ನು ಹಿಂದಿನ ಸರ್ಕಾರ ದಾಳವಾಗಿ ಬಳಸಿದ್ದರಿಂದ ಭಯೋತ್ಪಾದನೆ ತಡೆ ಹಾಗೂ ಅದರ ವಿರುದ್ಧದ ಹೋರಾಟವನ್ನು ದಿಕ್ಕುತಪ್ಪಿಸಿ ದುರ್ಬಲಗೊಳಿಸಿದೆ ಎಂದು ಕೇಂದ್ರ ಬಿಜೆಪಿ ಸರ್ಕಾರ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ಮಾಡಿದೆ.

ಪಂಜಾಬ್ ನ ಗುರುದಾಸಪುರದಲ್ಲಿನಡೆದ ಉಗ್ರರ ದಾಳಿ ಪ್ರಕರಣ ಕುರಿತು ಲೋಕಸಭೆಯಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಅವರು ನೀಡಿದ ಹೇಳಿಕೆಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ಶುಕ್ರವಾರ ಗದ್ದಲ ಎಬ್ಬಿಸಿ, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದವು.

ಈ ವೇಳೆ ಮಾತನಾಡಿದ ಗೃಹ ಸಚಿವ ರಾಜನಾಥ್ ಸಿಂಗ್, ಭಯೋತ್ಪಾದನೆ ರಾಷ್ಟ್ರ ಎದುರಿಸುತ್ತಿರುವ ದೊಡ್ಡ ಸವಾಲಾಗಿದೆ. ಭಯೋತ್ಪಾದನೆ ವಿರುದ್ಧ ಹೋರಾಡುವ ವೇಳೆ ಇಂಥ ಪದಗಳ ಬಳಕೆಯಿಂದ ಅಡ್ಡಿಯಾಗುತ್ತದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT