ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₨ 9 ಕೋಟಿ ಅಕ್ರಮ ಆಸ್ತಿ ಪತ್ತೆ

Last Updated 26 ಆಗಸ್ಟ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ಏಳು ಸರ್ಕಾರಿ ನೌಕರರಿಗೆ ಸೇರಿದ ನಿವಾಸಗಳ ಮೇಲೆ ಮಂಗಳ­ವಾರ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ₨ 9.7 ಕೋಟಿಗಿಂತ ಹೆಚ್ಚಿನ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ.

ನೌಕರರಿಗೆ ಸೇರಿದ ಬ್ಯಾಂಕ್‌ ಖಾತೆ­ಗಳು, ಲಾಕರ್‌ಗಳ ಶೋಧ ಮುಂದು ವರಿದಿದೆ.

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾ­ದಿಸಿದ ಬಗ್ಗೆ ದೊರೆತ ಖಚಿತ ಮಾಹಿತಿ ಆಧರಿಸಿ ಲೋಕಾಯುಕ್ತ ಪೊಲೀಸರು ಸೋಮವಾರವೇ ಪ್ರಕರಣ ದಾಖಲಿಸಿ­ಕೊಂಡಿದ್ದರು. ಚಿತ್ರ ದುರ್ಗ, ಕೋಲಾರ, ಮೈಸೂರು ಸೇರಿದಂತೆ ಈ ನೌಕರರ ಆಸ್ತಿ ಇರುವ 14 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಯಿತು ಎಂದು ಲೋಕಾ­ಯುಕ್ತ ಎಡಿಜಿಪಿ ಎಚ್‌.ಎನ್‌. ಸತ್ಯ ನಾರಾಯಣ ರಾವ್‌  ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT