ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10ನೇ ಸ್ಥಾನಕ್ಕೇರಿದ ಜೋಷ್ನಾ

Last Updated 1 ಜುಲೈ 2016, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):  ಭಾರತದ ಭರವಸೆಯ ಸ್ಕ್ವಾಷ್‌ ಆಟಗಾರ್ತಿ ಜೋಷ್ನಾ ಚಿಣ್ಣಪ್ಪ ಅವರು ಶುಕ್ರವಾರ ವೃತ್ತಿಪರ ಸ್ಕ್ವಾಷ್‌ ಸಂಸ್ಥೆ (ಪಿಎಸ್‌ಎ) ಬಿಡುಗಡೆ ಮಾಡಿರುವ ನೂತನ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ 10ನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.

ಇದು ಜೋಷ್ನಾ ಅವರ ವೃತ್ತಿಜೀವನದ ಶ್ರೇಷ್ಠ ಸಾಧನೆ ಎನಿಸಿದೆ. ಜೋಷ್ನಾ ವಿಶ್ವ ರ್‍ಯಾಂಕಿಂಗ್‌ನಲ್ಲಿ ಅಗ್ರ ಹತ್ತರೊಳಗೆ ಸ್ಥಾನ ಗಳಿಸಿದ ಭಾರತದ ಎರಡನೇ ಆಟಗಾರ್ತಿ ಎಂಬ ಶ್ರೇಯಕ್ಕೆ ಭಾಜನರಾಗಿದ್ದಾರೆ.

2012ರ ಡಿಸೆಂಬರ್‌ನಲ್ಲಿ ದೀಪಿಕಾ ಪಳ್ಳಿಕಲ್‌ ಅವರಿಂದ ಮೊದಲ ಬಾರಿಗೆ   ಈ ಸಾಧನೆ ಮೂಡಿಬಂದಿತ್ತು.
ಹಿಂದಿನ ಆರು ತಿಂಗಳಲ್ಲಿ ನಡೆದ ಅನೇಕ ಟೂರ್ನಿಗಳಲ್ಲಿ ಅಮೋಘ ಸಾಮರ್ಥ್ಯ ತೋರಿದ್ದ ಜೋಷ್ನಾ ಅವರು ಒಂಬತ್ತರಿಂದ 10ನೇ ಸ್ಥಾನಕ್ಕೆ ಬಡ್ತಿ ಹೊಂದಿದ್ದಾರೆ.

ಜೋಷ್ನಾ ಅವರು ಮೇ  ತಿಂಗಳಿನಲ್ಲಿ ಹಾಂಕಾಂಗ್‌ನಲ್ಲಿ ನಡೆದಿದ್ದ ಎಚ್‌ಕೆಎಫ್‌ಸಿ ಅಂತರರಾಷ್ಟ್ರೀಯ ಟೂರ್ನಿಯ ಸಿಂಗಲ್ಸ್‌ ವಿಭಾಗದಲ್ಲಿ ಫೈನಲ್‌ ಪ್ರವೇಶಿಸಿದ್ದರು.

ಜುಲೈ 12ರಿಂದ ಮುಂಬೈನಲ್ಲಿ ನಡೆಯುವ ರಾಷ್ಟ್ರೀಯ ಚಾಂಪಿಯನ್‌ ಷಿಪ್‌ನಲ್ಲಿ ಜೋಷ್ನಾ ಅವರು ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದು ರ್‍ಯಾಂಕಿಂಗ್‌ನಲ್ಲಿ ಬಡ್ತಿ ಹೊಂದಿರುವುದು ಅವರ ವಿಶ್ವಾಸವನ್ನು ಇಮ್ಮಡಿಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT