ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ಲಕ್ಷ ಜನರಿಗೆ ಎಬೋಲಾ ಸೋಂಕು

Last Updated 14 ಆಗಸ್ಟ್ 2014, 19:30 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ (ಪಿಟಿಐ): ಪಶ್ಚಿಮ ಆಫ್ರಿಕಾದಲ್ಲಿ ತೀವ್ರವಾಗಿ ಹರಡುತ್ತಿರುವ ಮಾರಣಾಂತಿಕ ಎಬೋಲಾ ವೈರಸ್‌ ಸೋಂಕಿನ ಪರಿಣಾಮ ಹತ್ತು ಲಕ್ಷಕ್ಕೂ ಹೆಚ್ಚು ಜನರ ಮೇಲೆ ಉಂಟಾಗಿದ್ದು, ತಕ್ಷಣದಲ್ಲಿ ಸೋಂಕಿನ ನಿವಾರಣೆ ಸಾಧ್ಯವಿರದ ಕಾರಣ ಸೋಂಕು ಹರಡದಂತೆ ವಿಶೇಷ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಭಿಪ್ರಾಯಪಟ್ಟಿದೆ.

ಕಳೆದ ಆಗಸ್ಟ್‌ 10ರಿಂದ 11ರ ನಡುವೆ  ಗಿನಿ, ಲೈಬೀರಿಯಾ, ನೈಜೀರಿಯಾ ಮತ್ತು ಸಿಯೆರಾ ಲಿಯೋನ್‌ನಲ್ಲಿ ಹೊಸದಾಗಿ 128 ಪ್ರಕರಣಗಳು ಪತ್ತೆಯಾಗಿದ್ದು, 56 ಸಾವು ಸಂಭವಿಸಿದೆ. ಈ ಮೂಲಕ ಸೋಂಕಿನ  ಪ್ರಕರಣಗಳ ಸಂಖ್ಯೆ 1,975ಕ್ಕೆ ಹಾಗೂ ಮೃತಪಟ್ಟವರ ಸಂಖ್ಯೆ 1,069ಕ್ಕೆ ಏರಿದೆ  ಎಂದು ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ನಿರ್ದೇಶಕಿ ಮಾರ್ಗರೇಟ್‌ ಚಾನ್‌ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ‘ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಜನರು ಮಾರಣಾಂತಿಕ ಎಬೋಲಾ ವೈರಸ್‌ ಸೋಂಕಿನ ಪರಿಣಾಮ ಎದುರಿಸುತ್ತಿದ್ದಾರೆ. ಇವರಿಗೆ ಆಹಾರ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕಿದೆ. ಸೋಂಕು ಹರಡುವುದನ್ನು ತಡೆಯಲು ವಿಶೇಷ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಇದ್ದಲ್ಲಿ ತೀವ್ರ ಆರೋಗ್ಯ ಬಿಕ್ಕಟ್ಟು ತಲೆದೋರಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ವಿಶ್ವ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್‌ ಕಿ ಮೂನ್‌ ‘ಮಾರಣಾಂತಿಕ ಎಬೋಲಾ ಸೋಂಕಿನ ನಿವಾರಣೆಗೆ ವಿಶ್ವ ಆರೋಗ್ಯ ಸಂಸ್ಥೆ ಶ್ರಮ ವಹಿಸುತ್ತಿದ್ದು, ವಿಶ್ವ ಸಂಸ್ಥೆಯಿಂದಲೂ ಅಗತ್ಯ ಸಹಕಾರ ನೀಡಲಾಗುವುದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT