ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

108 ಹಳ್ಳಿಗಳಲ್ಲಿ ನೀರಿನ ಸಮಸ್ಯೆ

Last Updated 3 ಸೆಪ್ಟೆಂಬರ್ 2015, 11:07 IST
ಅಕ್ಷರ ಗಾತ್ರ

ಗೌರಿಬಿದನೂರು: ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ಪಿ.ಎಸ್.ಮುನೇಗೌಡ ತಿಳಿಸಿದರು.

ತಾಲ್ಲೂಕು ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಬಹುತೇಕ ರೈತರಿಗೆ ಹಾಗೂ ಸಾರ್ವಜನಿಕರಿಗೆ ಇಲಾಖೆಗಳಲ್ಲಿ ಇರುವ ಸೌಲಭ್ಯಗಳ ಬಗ್ಗೆ ತಿಳಿದಿರುವುದಿಲ್ಲ. ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಕಚೇರಿಗಳ ನಾಮಫಲಕದಲ್ಲಿ ಸೌಲಭ್ಯ ಯೋಜನೆಗಳ ಬಗ್ಗೆ ಸ್ಪಷ್ಟ ಮಾಹಿತಿ ಪ್ರದರ್ಶಿಸಬೇಕು ಎಂದರು.

ತಾಲ್ಲೂಕಿನಲ್ಲಿ ಕಳೆದ ವಾರ ಮಳೆ ಬಿದ್ದ ಸಂದರ್ಭದಲ್ಲಿ ಯೂರಿಯ ರಸಗೊಬ್ಬರವನ್ನು ಖಾಸಗಿ ಅಂಗಡಿಯವರು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಜತಗೆ ಕೃತಕ ಬೇಡಿಕೆಯನ್ನು ನಿರ್ಮಿಸಿ ಹೆಚ್ಚಿನ ಲಾಭ ಪಡೆಯುತ್ತಿದ್ದಾರೆ ಎಂಬ ದೂರು ಕೇಳಿ ಬರುತ್ತಿದೆ. ಈ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತಿ ಸದಸ್ಯ ರಾಘವೇಂದ್ರ ಹನುಮಾನ್ ಕೃಷಿ ಅಧಿಕಾರಿ ಮಂಜುನಾಥ ಅವರನ್ನು ಪ್ರಶ್ನಿಸಿದರು. ಅದಕ್ಕೆ ಅಂತಹ ಅಂಗಡಿಗಳ ಮೇಲೆ ದಾಳಿ ನಡೆಸಿ ಎಚ್ಚರಿಕೆ ನೀಡಲಾಗಿದೆ ಎಂದರು.

ತಾಲ್ಲೂಕಿನಲ್ಲಿ 108 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು ಅದರಲ್ಲಿ 32 ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ಸರಬರಾಜು ಮಾಡಲಾಗುತ್ತಿದೆ. ಹೊಸೂರು ಹೋಬಳಿ, ಕಸಬಾ, ಹಾಗೂ ಜರಬಂಡಹಳ್ಳಿ ಪುರ ಗ್ರಾಮ ಪಂಚಾಯತಿಗಳಲ್ಲಿ ನೀರಿನ ಸಮಸ್ಯೆ ಇದ್ದು, ತಾಲ್ಲೂಕಿನಲ್ಲಿ 95 ಕೊಳವೆಬಾವಿಗಳನ್ನು ಕೊರೆಸಲು ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಎಂಜಿನಿಯರ್ ಗಂಗಣ್ಣ ಸಭೆಗೆ ತಿಳಿಸಿದರು.

ತಾಲ್ಲೂಕಿನ ವಸತಿ ನಿಲಯಗಳಲ್ಲಿ ಸ್ವಚ್ಛತೆ ಹಾಗೂ ಗುಣಮಟ್ಟದ ಆಹಾರ ನೀಡುತ್ತಿಲ್ಲ ಎಂದು ದೂರುಗಳು ಕೇಳಿಬರುತ್ತಿವೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕೇಶವರೆಡ್ಡಿ ಸಮಾಜ ಕಲ್ಯಾಣ ಇಲಾಖೆ ಮಲ್ಲಿಕಾರ್ಜುನ್ ಅವರನ್ನು ಪ್ರಶ್ನಿಸಿದರು.

ಮುಂದಿನ ವಾರದಲ್ಲಿ ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಕುರಿ, ಮೇಕೆಗಳಿಗೆ ಲಸಿಕೆ ನೀಡಲು ಹೋಬಳಿಗೆ ಒಂದರಂತೆ ವೈದ್ಯರ 6 ತಂಡಗಳನ್ನು ರಚಿಸಿಲಾಗಿದೆ. 5 ಸಾವಿರ ಮೇವಿನ ಬೀಜದ ಕಿಟ್‌ಗಳ ಬೇಡಿಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಪಶುಸಂಗೋಪನಾ ಇಲಾಖೆ ಅಧಿಕಾರಿ ಡಾ.ಪಾಂಡುರಂಗಪ್ಪ ಸಭೆಗೆ ತಿಳಿಸಿದರು.    
   
ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ರಾಧಮ್ಮ, ಸದಸ್ಯ ರಾಘವೇಂದ್ರ ಹನುಮಾನ್, ಸದಸ್ಯೆ ರಜನಿ ವೇಣುಗೋಪಾಲರೆಡ್ಡಿ, ಚಿನ್ನಪ್ಪಯ್ಯ, ಕೇಶವರೆಡ್ಡಿ, ತಾಲ್ಲೂಕು ಪಂಚಾಯತಿ ಅಧ್ಯಕ್ಷ ಎನ್.ಪ್ರಭಾಕರ್, ಕಾರ್ಯನಿರ್ವಹಣಾಧಿಕಾರಿ ಮಹಮದ್ ಮುಬೀನ್, ತಾಲ್ಲೂಕು ಪಂಚಾಯತಿ ಸದಸ್ಯ ಗಂಗಾಧರಪ್ಪ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT