ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2ರಿಂದ ಅಂಗನವಾಡಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

Last Updated 25 ಜನವರಿ 2015, 20:39 IST
ಅಕ್ಷರ ಗಾತ್ರ

ಬೆಂಗಳೂರು: ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್‌) ಖಾಸಗೀಕರಣ ಪ್ರಸ್ತಾವ ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾ­ಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ಫೆಬ್ರುವರಿ 2ರಿಂದ ರಾಜ್ಯದಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಿದೆ.

‘ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ಹೋಗಲಾಡಿಸು­ವಲ್ಲಿ ಐಸಿಡಿಎಸ್ ಯೋಜನೆ ಮಹತ್ವದ ಪಾತ್ರ ವಹಿ­ಸುತ್ತಿದೆ. ಈ ಯೋಜನೆಯನ್ನು ಇನ್ನಷ್ಟು ಬಲ­ಪಡಿಸಲು ಬೇಕಾದ ಸ್ವಂತ ಕಟ್ಟಡ, ಶೌಚಾಲಯ, ನೌಕರರಿಗೆ ಭದ್ರತೆ ಮುಂತಾದ ಸೌಲಭ್ಯ­ಗಳನ್ನು ಒದಗಿ­ಸುವ ಬದಲು ಖಾಸಗಿ­ಯವರಿಗೆ ನೀಡಲು ಹೊರಟಿ­ರುವು­ದನ್ನು ವಿರೋಧಿಸಿ ಆಯಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಮುಷ್ಕರ ನಡೆಸ­ಲಾಗು­ವುದು’ ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್.­ವರಲಕ್ಷ್ಮಿ ತಿಳಿಸಿದ್ದಾರೆ.

ಐಸಿಡಿಎಸ್‌ ಯೋಜನೆಯನ್ನು ಯಾವುದೇ ರೂಪ­ದಲ್ಲೂ  ಖಾಸಗಿಕರಣ­ಗೊಳಿಸಬಾರದು. 39 ವರ್ಷ­ದಿಂದ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ನೌಕರರಿಗೆ ₨15ಸಾವಿರ ಮಾಸಿಕ ವೇತನ ನೀಡಬೇಕು. ₨3ಸಾವಿರ  ಮಾಸಿಕ ಪಿಂಚಣಿ ನೀಡಬೇಕು ಎಂಬುದು ಪ್ರಮುಖ ಒತ್ತಾಯವಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT