ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

24 ಸ್ಥಾನಗಳಿಗೆ 70 ಅಭ್ಯರ್ಥಿಗಳು

Last Updated 28 ಮೇ 2015, 7:26 IST
ಅಕ್ಷರ ಗಾತ್ರ

ಯಾದಗಿರಿ: ಗ್ರಾಮ ಪಂಚಾಯಿತಿ ಚುನಾವಣೆಗಳು ತೀವ್ರ ರಂಗೇರಿದ್ದು, ಅಭ್ಯರ್ಥಿಗಳ ಸಂಖ್ಯೆಯೂ ಹೆಚ್ಚಾಗಿದೆ. ಪಂಚಾಯಿತಿ ಸದಸ್ಯತ್ವಕ್ಕಾಗಿ ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ಮಾಡುತ್ತಿದ್ದಾರೆ.

ತಾಲ್ಲೂಕಿನ ಹೊನಗೇರಾ ಗ್ರಾಮ ಪಂಚಾಯಿತಿಯ ಒಟ್ಟು 25 ಸ್ಥಾನಗಳಿಗೆ 70 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಒಟ್ಟು 100 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ನಾಮಪತ್ರ ಹಿಂಪಡೆಯಲು ಕೊನೆಯ ದಿನ 30 ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲಾಗಿದೆ.

1 ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದ್ದು, ಇನ್ನುಳಿದ 24 ಸ್ಥಾನಗಳಿಗೆ 70 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾ ಅಧಿಕಾರಿ ರಾಜುಕುಮಾರ ತಿಳಿಸಿದರು. ಸುತಾರ ಹೊಸಳ್ಳಿ ತಾಂಡಾದ ಪರಿಶಿಷ್ಟ ಜಾತಿಯ 1 ಸ್ಥಾನಕ್ಕೆ ಬಾಬುರಾವ್ ಫೂಲಸಿಂಗ್ ಅವಿರೋಧ ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ಒಂದೊಂದು ಮತಗಳು ಮಹತ್ವದ್ದಾಗಿದೆ. ಅಭ್ಯರ್ಥಿಗಳ ಸಂಖ್ಯೆ ಹೆಚ್ಚಿದಂತೆಲ್ಲ, ಪ್ರತಿಸ್ಪರ್ಧಿಗಳು ಹೆಚ್ಚಿನ ಪ್ರಯಾಸ ಮಾಡಬೇಕಾಗಿದೆ. 600 ಮತಗಳಿರುವ ವಾರ್ಡ್‌ನಲ್ಲಿ ನಾಲ್ಕೈದು ಅಭ್ಯರ್ಥಿಗಳು ಸ್ಪರ್ಧಿಸಿದ್ದು, 160 ಮತಗಳನ್ನು ಪಡೆದರೂ, ಆಯ್ಕೆಯಾಗುವುದು ಸುಲಭ ಎನ್ನುವ ಲೆಕ್ಕಾಚಾರಗಳು ನಡೆದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT