ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25ರಂದು ವಿಚಾರಸಂಕಿರಣ

Last Updated 19 ಮಾರ್ಚ್ 2015, 7:34 IST
ಅಕ್ಷರ ಗಾತ್ರ

ಮೈಸೂರು: ಮಹಾರಾಜ ಕಾಲೇಜಿನ ಕನ್ನಡ ವಿಭಾಗವು ಮಾರ್ಚ್ 25ರಂದು ಬೆಳಿಗ್ಗೆ 9.45ಕ್ಕೆ ಇಲ್ಲಿನ ಶತಮಾನೋತ್ಸವ ಭವನದಲ್ಲಿ ‘ಆಧುನಿಕ ವಿಮರ್ಶೆಯ ಸೈದ್ಧಾಂತಿಕ ನೆಲೆಗಳು ಹಾಗೂ ಪ್ರಾಯೋಗಿಕ ವಿಮರ್ಶೆ’ ಕುರಿತ ರಾಷ್ಟ್ರಮಟ್ಟದ ವಿಚಾರಸಂಕಿರಣ ಏರ್ಪಡಿಸಿದೆ.

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ  ಕಾರ್ಯಕ್ರಮವನ್ನು ಉದ್ಘಾಟಿಸುವರು. ‘ಆಧುನಿಕ ವಿಮರ್ಶೆಯ ಸೈದ್ಧಾಂತಿಕ ನೆಲೆಗಳು’ ಕುರಿತು ನಡೆಯುವ ಗೋಷ್ಠಿಯ ಅಧ್ಯಕ್ಷತೆಯನ್ನು ವಿಮರ್ಶಕ ಸಿ.ಎನ್. ರಾಮಚಂದ್ರನ್ ವಹಿಸಲಿದ್ದು, ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಬಿ.ವಿ. ವಸಂತಕುಮಾರ್, ಪ್ರೊ.ಕೃಷ್ಣಮೂರ್ತಿ ಮೈಸೂರು, ಹಾಸನದ ಸ್ನಾತಕೋತ್ತರ ಕೇಂದ್ರದ ಸಹಪ್ರಾಧ್ಯಾಪಕ ಡಾ.ಎಂ. ಶಂಕರ್, ಕಲಬುರ್ಗಿ ಕೇಂದ್ರೀಯ ವಿವಿಯ ಸಹಪ್ರಾಧ್ಯಾಪಕ ಡಾ.ಅಪ್ಪಗೆರೆ ಸೋಮಶೇಖರ, ಬೆಂಗಳೂರಿನ ವಿಜಯ ಕಾಲೇಜಿನ ಪ್ರೊ.ಶಾಂತರಾಜು, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಎಸ್.ಡಿ. ಶಶಿಕಲಾ ಅವರು ವಿವಿಧ ವಿಷಯಗಳ  ಕುರಿತು ವಿಷಯ ಮಂಡಿಸಲಿದ್ದಾರೆ.

‘ಪ್ರಾಯೋಗಿಕ ವಿಮರ್ಶೆ’ ಕುರಿತು ನಡೆಯಲಿರುವ ಗೋಷ್ಠಿಯ 2ರ ಅಧ್ಯಕ್ಷತೆಯನ್ನು ಕಲ್ಲಿಕೋಟೆ ವಿಶ್ವವಿದ್ಯಾಲಯದ ಕಾಸರಗೋಡುವಿನ ನಿವೃತ್ತ ಪ್ರಾಧ್ಯಾಪಕ ಡಾ.ಕೆ. ಕಮಲಾಕ್ಷ ವಹಿಸಲಿದ್ದು, ನಂಜನಗೂಡಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಶಿವಸ್ವಾಮಿ ಹಾಗೂ ಕುವೆಂಪುನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ವಿಷಯ ಮಂಡಿಸಲಿದ್ದಾರೆ.

ಬೆಂಗಳೂರಿನ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ನಟರಾಜ್ ಹುಳಿಯಾರ್ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಸ್ಮಾರಕ ರಕ್ಷಿಸಿ
ಚನ್ನರಾಯಪಟ್ಟಣ: ಸಂಸ್ಕ್ರತಿಯ ಬಿಂಬಿಸುವ ಪ್ರಾಚೀನ ಸ್ಮಾರಕಗಳನ್ನು ಸಂರಕ್ಷಿಸಬೇಕಿದೆ ಎಂದು ಪ್ರಾಚ್ಯವಸ್ತು ಇಲಾಖೆಯ ಉಪನಿರ್ದೇಶಕ ಡಾ.ಗವಿಸಿದ್ದಯ್ಯ ಹೇಳಿದರು.

ಈಚೆಗೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಪರಂಪರಾ ಕೂಟದ ಉದ್ಘಾಟನಾ ಸಮಾರಂಭದಲ್ಲಿ  ಅವರು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ ಡಾ. ಸುರೇಶ್‌, ಕಾಲೇಜು ಪ್ರಾಂಶುಪಾಲ ಎಂ.ಕೆ. ಉಮಾನಾಥ್‌, ಸಂಚಾಲಕ ರಾಜೇಶ್‌ ಖನ್ನಾ, ಅನಸೂಯಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT