ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3 ವರ್ಷಗಳಲ್ಲಿ ದೇಶದಲ್ಲಿ 88836 ಅತ್ಯಾಚಾರ

Last Updated 23 ಜುಲೈ 2014, 10:24 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೇಶದಲ್ಲಿ ಕಳೆದ ಮೂರು ವರ್ಷಗಳಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಗಳ ಸಂಖ್ಯೆ 88836. ಇದೇ ಅವಧಿಯಲ್ಲಿ ದಾಖಲಾದ ಮಕ್ಕಳ ವಿರುದ್ಧದ ಅಪರಾಧ ಸಂಖ್ಯೆ 1,29,448. ಅದರಲ್ಲಿ 2013ನೇ ವರ್ಷಕ್ಕೆ ಸಿಂಹಪಾಲು!

‌‘ಲಭ್ಯವಿರುವ ಅಂಕಿಅಂಶಗಳ ಪ್ರಕಾರ, 2011, 2012 ಹಾಗೂ 2013ರಲ್ಲಿ ಮಕ್ಕಳ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದಂತೆ ಕ್ರಮವಾಗಿ 33,052, 38,172 ಹಾಗೂ 58,224 ಪ್ರಕರಣಗಳು ದಾಖಲಾಗಿವೆ’ ಎಂದು ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್‌ ರಿಜುಜು ಅವರು ತಿಳಿಸಿದ್ದಾರೆ.

‘ರಾಷ್ಟ್ರೀಯ ಅಪರಾಧ ದಾಖಲಾತಿ ಸಂಸ್ಥೆ ಒದಗಿಸಿರುವ ಅಂಕಿಅಂಶಗಳ ಪ್ರಕಾರ ಕಳೆದ ಮೂರು ವರ್ಷಗಳಲ್ಲಿ 88,836 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ.  2011, 2012 ಹಾಗೂ 2013ರಲ್ಲಿ ಕ್ರಮವಾಗಿ 24,206, 24,923 ಹಾಗೂ 33,707 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ’ ಎಂದೂ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT