ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3,000 ಅವೈಜ್ಞಾನಿಕ ರಸ್ತೆ ಉಬ್ಬು

Last Updated 22 ಜುಲೈ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ 3,000 ಅವೈಜ್ಞಾನಿಕ ರಸ್ತೆ ಉಬ್ಬುಗಳಿದ್ದು (ಹಂಪ್ಸ್‌), 3 ತಿಂಗಳಲ್ಲಿ ಈ ರಸ್ತೆ ಉಬ್ಬು­ಗಳನ್ನು  ವೈಜ್ಞಾನಿಕ ರಸ್ತೆ ಉಬ್ಬು­ಗಳನ್ನಾಗಿ ಮಾರ್ಪಡಿಸ ಲಾಗು­ವುದು ಎಂದು ಲೋಕೋಪಯೋಗಿ ಸಚಿವ ಡಾ.ಎಚ್‌್.ಸಿ. ಮಹದೇವಪ್ಪ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ವೀರಕುಮಾರ್‌ ಅಪ್ಪಾಸೊ ಪಾಟೀಲ್‌ ಅವರ ಪ್ರಶ್ನೆಗೆ ಉತ್ತರಿಸಿ, ‘ರಾಜ್ಯದಲ್ಲಿ 9,000ಕ್ಕೂ ಹೆಚ್ಚು ರಸ್ತೆ ಉಬ್ಬುಗಳಿವೆ. ಅವೈಜ್ಞಾನಿಕ ರಸ್ತೆ ಉಬ್ಬುಗಳಿಂದ ವಾಹನ ಸವಾರರಿಗೆ ತೊಂದರೆ ಆಗುತ್ತಿ­ರುವುದು ಗಮನಕ್ಕೆ ಬಂದಿದೆ. ಇವು­ಗಳನ್ನು ಸರಿಪಡಿಸಿ ವೈಜ್ಞಾನಿಕ ರಸ್ತೆ ಉಬ್ಬುಗಳನ್ನು ಅಳವಡಿಸಲಾಗುವುದು’ ಎಂದರು.

ಮೈಸೂರು–ಬೆಂಗಳೂರು ಹೆದ್ದಾರಿ­ಯಲ್ಲಿ 137 ರಸ್ತೆ ಉಬ್ಬುಗಳಿವೆ. ಅಪಘಾತಗಳನ್ನು ನಿಯಂತ್ರಿಸುವ ಉದ್ದೇಶದಿಂದ ಶಾಲೆಗಳು, ದೇವಸ್ಥಾನ­ಗಳ ಪಕ್ಕದಲ್ಲಿ ಜನರೇ ರಸ್ತೆ ಉಬ್ಬು ನಿರ್ಮಿಸಿದ್ದಾರೆ. ಕಳೆದ ವಾರ ಮೈಸೂರು ಹಾಗೂ ಬೆಂಗಳೂರಿನ ಪೊಲೀಸ್‌ ಅಧಿಕಾ­ರಿ­ಗಳ ಸಭೆ ನಡೆಸಿ ಅವೈಜ್ಞಾನಿಕ ಉಬ್ಬು ತೆಗೆ­ಯಲು ಸೂಚನೆ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ತರಹೇವಾರಿ ರಸ್ತೆ ಉಬ್ಬುಗಳು ಇವೆ. ಇವುಗಳಿಂದ ವಾಹನ ಸವಾರರು ಸಂಕಷ್ಟ ಅನುಭವಿ­ಸುತ್ತಿದ್ದಾರೆ. ಈ ಸಂಬಂಧ ತುರ್ತು ಕ್ರಮ ಕೈಗೊಳ್ಳಿ ಎಂದು ಸಭಾಪತಿ ಡಿ.ಎಚ್‌.­ಶಂಕರಮೂರ್ತಿ ವಿನಂತಿ ಮಾಡಿದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಉಬ್ಬು­ಇರಬಾರದು ಎಂದು ಭಾರತೀಯ ರೋಡ್‌ ಕಾಂಗ್ರೆಸ್‌ ಮಾರ್ಗಸೂಚಿ ಹೊರಡಿಸಿದೆ. ಆದರೆ, ರಾಜ್ಯದ ಹೆದ್ದಾರಿ­ಳಲ್ಲಿ ಉಬ್ಬುಗಳಿವೆ ಎಂದು ಬಿಜೆಪಿಯ ಗಣೇಶ್‌ ಕಾರ್ಣಿಕ್‌ ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT