ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ‘ಎ’ ಮತ್ತು ‘ಬಿ’ ಶ್ರೇಣಿಯ 440 ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿಗಾಗಿ ಬುಧವಾರ ಅಧಿಸೂಚನೆ ಹೊರಡಿಸಿದೆ. ಏಪ್ರಿಲ್ 19ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಆನ್ಲೈನ್ ಮೂಲಕ ಫೆಬ್ರುವರಿ 20ರ ರಾತ್ರಿ 11.45ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಕೆಪಿಎಸ್ಸಿ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷಾ ಶುಲ್ಕ: ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ–1ರ ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕರಿಗೆ ₨ 25 ಹಾಗೂ ಇತರರಿಗೆ ₨ 300 ಪರೀಕ್ಷಾ ಶುಲ್ಕ ನಿಗದಿ ಪಡಿಸಲಾಗಿದೆ. ಶುಲ್ಕ ಪಾವತಿಗೆ ಫೆಬ್ರುವರಿ 21 ಕಡೇ ದಿನ. ಅಭ್ಯರ್ಥಿಗಳು ರಾಜ್ಯದಲ್ಲಿರುವ ಗಣಕೀಕೃತ ಅಂಚೆ ಕಚೇರಿಗಳಲ್ಲಿ ಮಾತ್ರ ಶುಲ್ಕ ಪಾವತಿಸಬಹುದು.

ವಯೋಮಿತಿ: ಸಾಮಾನ್ಯ ವರ್ಗಕ್ಕೆ ಸೇರಿದ ಕನಿಷ್ಠ 21ರಿಂದ ಗರಿಷ್ಠ 35 ವರ್ಷ ವಯಸ್ಸಿನ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಅರ್ಹರು. 2ಎ/2ಬಿ/3ಎ/3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38 ವರ್ಷ. ಪರಿಶಿಷ್ಟ ಜಾತಿ/ಪಂಗಡ ಮತ್ತು ಪ್ರವರ್ಗ–1ಕ್ಕೆ ಸೇರಿದ ಗರಿಷ್ಠ 40 ವರ್ಷ ವಯಸ್ಸಿನ ಅಭ್ಯರ್ಥಿಗಳು ಪರೀಕ್ಷೆಯನ್ನು ತೆಗೆದುಕೊಳ್ಳಬಹುದು.

ಮಾಜಿ ಸೈನಿಕರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು. ಅಂಗವಿಕಲರು ಮತ್ತು ವಿಧವೆಯರಿಗೆ 10 ವರ್ಷಗಳ ಸಡಿಲಿಕೆ ಇದೆ. ಕಳೆದ ಡಿಸೆಂಬರ್ 5ರಂದು ಸರ್ಕಾರ ಹೊರಡಿಸಿರುವ ಆದೇಶದ ಅನ್ವಯ, ನಿಯಮಗಳ ಅನುಸಾರ ಅರ್ಹತೆ ಹೊಂದಿರುವ ಎಲ್ಲ ಅಭ್ಯರ್ಥಿಗಳಿಗೆ 2 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ ಎಂದು ಮೀನಾ ತಿಳಿಸಿದ್ದಾರೆ. ವಿವರಗಳಿಗೆ ಆಯೋಗದ ವೆಬ್ಸೈಟ್ಗೆ (http://kpsc.kar.nic.in/) ಭೇಟಿ ನೀಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.