ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

638 ಟನ್‌ ಚಿನ್ನ ಆಮದು

Last Updated 25 ಜುಲೈ 2014, 10:40 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಮತ್ತು ಕೇಂದ್ರ ಸರ್ಕಾರ ಕೈಗೊಂಡ ನಿಯಂತ್ರಣ ಕ್ರಮಗಳಿಂದ ಚಿನ್ನದ ಆಮದು ಗಣನೀಯವಾಗಿ ಇಳಿಕೆ ಕಾಣುತ್ತಿದೆ.  2013–14ನೇ ಸಾಲಿನಲ್ಲಿ ಒಟ್ಟು ರೂ 1.60 ಲಕ್ಷ ಕೋಟಿ ಮೌಲ್ಯದ 638 ಟನ್‌ಗಳಷ್ಟು ಚಿನ್ನ ಆಮದು ಮಾಡಿಕೊಳ್ಳಲಾಗಿದೆ. 2012–13ನೇ ಸಾಲಿಗೆ ಹೋಲಿಸಿದರೆ ಆಮದು ಪ್ರಮಾಣ ಶೇ 25ರಷ್ಟು ಇಳಿಕೆ ಕಂಡಿದೆ ಎಂದು ಹಣಕಾಸು ಖಾತೆಯ ರಾಜ್ಯ ಸಚಿವೆ ನಿರ್ಮಲಾ ಸೀತಾರಾಮನ್‌ ಶುಕ್ರವಾರ ಲೋಕಸಭೆಗೆ ತಿಳಿಸಿದ್ದಾರೆ.

ಆಮದು ಇಳಿಕೆ ಕಂಡಿರುವ ಹಿನ್ನೆಲೆಯಲ್ಲಿ 2013–14ನೇ ಸಾಲಿನಲ್ಲಿ ಚಾಲ್ತಿ ಖಾತೆ ಕೊರತೆಯೂ (ಸಿಎಡಿ)  ಜಿಡಿಪಿಯ ಶೇ 1.7ಕ್ಕೆ ಇಳಿಕೆ ಕಂಡಿದೆ ಎಂದು ಅವರು ಹೇಳಿದ್ದಾರೆ.

2012–13ನೇ ಸಾಲಿನಲ್ಲಿ ರೂ 2.45 ಲಕ್ಷ ಕೋಟಿ ಮೌಲ್ಯದ 845 ಟನ್‌ಗಳಷ್ಟು ಚಿನ್ನ ಆಮದು ಮಾಡಿ­ಕೊಳ್ಳ­ಲಾಗಿತ್ತು. 2011–12ನೇ ಸಾಲಿನಲ್ಲಿ ಇದು 919 ಟನ್‌ಗಳಷ್ಟಿತ್ತು.
ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್‌–ಜೂನ್‌) ಒಟ್ಟು 54,792 ಕೋಟಿ ಮೌಲ್ಯದ   221 ಟನ್‌ಗಳಷ್ಟು ಚಿನ್ನ ಆಮದು ಮಾಡಿಕೊಳ್ಳಲಾಗಿದೆ. 

ಚಿನ್ನ ಕಳ್ಳಸಾಗಾಣಿಕೆಗೆ ಸಂಬಂಧಿಸಿ­ದಂತೆ 2013–14ನೇ ಸಾಲಿನಲ್ಲಿ 2,441 ಪ್ರಕರಣಗಳು ದಾಖಲಾಗಿವೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT