ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತಾಬ್‌ಗೆ ಸಾಮಾಜಿಕ ಮಾಧ್ಯಮ ಪ್ರಶಸ್ತಿ

Last Updated 14 ಜನವರಿ 2015, 13:02 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಬಾಲಿವುಡ್‌ ಮೆಗಾಸ್ಟಾರ್‌  ಅಮಿತಾಬ್‌ ಬಚ್ಚನ್‌ ಅವರಿಗೆ ‘ಸಾಮಾಜಿಕ ಮಾಧ್ಯಮ ವರ್ಷದ ವ್ಯಕ್ತಿ’ ಪ್ರಶಸ್ತಿ ಲಭಿಸಿದೆ.

ಭಾರತೀಯ ಇಂಟರ್‌ನೆಟ್‌ ಮತ್ತು ಮೊಬೈಲ್‌ ಸೇವಾ ಸಂಸ್ಥೆಗಳ ಒಕ್ಕೂಟ (ಐಎಂಎಐ) ಟ್ವಿಟರ್‌, ಫೇಸ್‌ಬುಕ್‌ ಸೇರಿದಂತೆ  ಸಾಮಾಜಿಕ  ಜಾಲ ತಾಣಗಳನ್ನು ಪರಿಣಾಮಕಾರಿಯಾಗಿ ಬಳಸುವ ವ್ಯಕ್ತಿಗಳಿಗೆ ಈ ಪ್ರಶಸ್ತಿ ನೀಡುತ್ತದೆ.

72 ವರ್ಷದ ಅಮಿತಾಬ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಆನ್‌ಲೈನ್‌ ಬ್ಲಾಗ್‌ಗಳಲ್ಲಿ ಸದಾ ಸಕ್ರಿಯರಾಗಿದ್ದಾರೆ ಎಂದು ‘ಐಎಂಎಐ’ ಅಭಿಪ್ರಾಯಪಟ್ಟಿದೆ. ತಮಗೆ ಲಭಿಸಿರುವ ಪ್ರಶಸ್ತಿಯನ್ನು ಅಮಿತಾಬ್‌ ತಮ್ಮ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಅರ್ಪಿಸಿದ್ದಾರೆ. 

ಬಚ್ಚನ್‌ ಅವರ ಟ್ವಿಟರ್‌ ಖಾತೆಗೆ 10 ದಶಲಕ್ಷಕ್ಕೂ ಹೆಚ್ಚು ಹಿಂಬಾಲಕರಿದ್ದಾರೆ.   ಸಾಮಾಜಿಕ ತಾಣಗಳಲ್ಲಿ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಬಾಲಿವುಡ್‌ ಸೆಲೆಬ್ರಿಟಿಗಳಲ್ಲಿ ಅವರು ಮುಂಚೂಣಿಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT