ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

Last Updated 12 ನವೆಂಬರ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು:  ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2015ರ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಬುಧವಾರ

ಪ್ರಕಟಿಸಿದೆ. ಮಾರ್ಚ್‌ 30ರಿಂದ ಏಪ್ರಿಲ್‌ 13ರವರೆಗೆ ಪರೀಕ್ಷೆಗಳು ನಡೆಯಲಿವೆ.ಪ್ರತಿ ವಿಷಯದ ಪ್ರಶ್ನೆ ಪತ್ರಿಕೆ ಓದಲು  ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಾರಂಭದಲ್ಲಿ 15 ನಿಮಿಷಗಳ ಕಾಲಾವಕಾಶ ನೀಡಲಾಗಿದೆ. ವೇಳಾಪಟ್ಟಿ ಇಂತಿದೆ.

ಬೋಧನಾ ಅವಧಿ 22 ಗಂಟೆಗೆ: ಇಂದಿನಿಂದ ಅತಿಥಿ ಉಪನ್ಯಾಸಕರಿಂದ ತರಗತಿ ಬಹಿಷ್ಕಾರ
ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರ ವಾರದ ಬೋಧನಾ ಅವಧಿಯನ್ನು ಕಾಲೇಜು ಶಿಕ್ಷಣ ಇಲಾಖೆ 22 ಗಂಟೆಗೆ ಏರಿಸಿರುವುದನ್ನು ಖಂಡಿಸಿ ರಾಜ್ಯ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಗುರುವಾರದಿಂದ ರಾಜ್ಯದಾದ್ಯಂತ ತರಗತಿ ಬಹಿಷ್ಕರಿಸಲು ನಿರ್ಧರಿಸಿದೆ.

ಪರೀಕ್ಷಾ ಕರ್ತವ್ಯ, ಉತ್ತರ ಪತ್ರಿಕೆ ಮೌಲ್ಯಮಾಪನ ಸೇರಿದಂತೆ ಯಾವುದೇ ಕೆಲಸವನ್ನು ಮಾಡದಿರಲು ಸಂಘವು ತೀರ್ಮಾನಿಸಿದೆ.
ಮುತ್ತಿಗೆ: ಆದೇಶ ವಾಪಸ್‌ಗೆ ಒತ್ತಾಯಿಸಿ ಇದೇ 18ರಂದು ಇಲಾಖೆಯ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ’ ಎಂದು  ಸಂಘದ ಗೌರವಾಧ್ಯಕ್ಷ  ಬಿ. ರಾಜಶೇಖರ ಮೂರ್ತಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT