ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌.ಪಿ ಬಾಲಸುಬ್ರಹ್ಮಣ್ಯಂಗೆ ಆಳ್ವಾಸ್ ವಿರಾಸತ್ ಪ್ರಶಸ್ತಿ

Last Updated 14 ಡಿಸೆಂಬರ್ 2015, 20:02 IST
ಅಕ್ಷರ ಗಾತ್ರ

ಮೂಡುಬಿದಿರೆ: ಖ್ಯಾತ ಹಿನ್ನೆಲೆ ಗಾಯಕ ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಪ್ರಸಕ್ತ ಸಾಲಿನ ‘ಆಳ್ವಾಸ್ ವಿರಾಸತ್-2016’ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪುತ್ತಿಗೆ ವನಜಾಕ್ಷಿ ಶ್ರೀಪತಿ ಭಟ್ ವೇದಿಕೆಯಲ್ಲಿ ಇದೇ 24ರಿಂದ 27ರವರೆಗೆ ನಡೆಯುವ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಉತ್ಸವದ ಮೊದಲ ದಿನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ. ಪ್ರಶಸ್ತಿ ಪತ್ರವು ಪ್ರಶಸ್ತಿ ಫಲಕ ಹಾಗೂ ಒಂದು ಲಕ್ಷ ನಗದನ್ನು ಒಳಗೊಂಡಿರುತ್ತದೆ.

ಅವರ 40 ವರ್ಷಗಳ ಗಾಯನ ಪಯಣದಲ್ಲಿ ವಿವಿಧ ಭಾಷೆಗಳಲ್ಲಿ ಸುಮಾರು 25 ಸಾವಿರಕ್ಕಿಂತ ಹೆಚ್ಚು ಹಾಡುಗಳು ಧ್ವನಿಸುರುಳಿಗಳಾಗಿವೆ. ವಿವಿಧ ಭಾಷೆಗಳ 100ಕ್ಕೂ ಹೆಚ್ಚು ಚಿತ್ರಗಳಿಗೆ ಕಂಠದಾನ ಮಾಡಿದ್ದಾರೆ. ಇವರಿಗೆ ದೇಶ ವಿದೇಶಗಳ ಸಂಘ ಸಂಸ್ಥೆಗಳಿಂದ, ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿವೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT