ಭುವನೇಶ್ವರ: ಒಡಿಯಾ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಪ್ರಸ್ತಾವಕ್ಕೆ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದಲ್ಲಿ ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಶಾಸ್ತ್ರೀಯ ಸ್ಥಾನಮಾನ ಪಡೆದ ಆರನೇ ಭಾಷೆ ಹಾಗೂ ಮೊದಲ ದ್ರಾವಿಡೇತರ ಭಾಷೆ ಎಂಬ ಹೆಗ್ಗಳಿಕೆಗೆ ಒಡಿಯಾ ಪಾತ್ರವಾಗಲಿದೆ.
ಶಾಸ್ತ್ರೀಯ ಸ್ಥಾನಮಾನ ಪಡೆದ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಪ್ರಾಚೀನ ಸಂಸ್ಕೃತ ಭಾಷೆಗಳ ಸಾಲಿಗೆ ಈಗ ಒಡಿಯಾ ಕೂಡ ಸೇರಲಿದೆ.
ಒಡಿಯಾ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಕೇಂದ್ರ ಸಂಪುಟದ ನಿರ್ಧಾರ ಹೊರಬೀಳುತ್ತಲೇ ಒಡಿಶಾದಾದ್ಯಂತ ಸಂಭ್ರಮ ಮನೆಮಾಡಿದೆ.
ಭಾಷಾ ತಜ್ಞರು, ಸಾಹಿತಿಗಳು, ಶಿಕ್ಷಣ ತಜ್ಞರು, ರಾಜಕೀಯ ಮುಖಂಡರು ಕೇಂದ್ರ ಸಂಪುಟದ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
ಶಾಸ್ತ್ರೀಯ ಸ್ಥಾನಮಾನ ದೊರಕುವಲ್ಲಿ ಒಡಿಯಾ ಭಾಷಾ ಅಭಿವೃದ್ಧಿ ಪ್ರಾಧಿಕಾರ ಸಾಕಷ್ಟು ಕೆಲಸ ಮಾಡಿದೆ.