ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ ನೇಮಕ

Last Updated 17 ಏಪ್ರಿಲ್ 2015, 19:30 IST
ಅಕ್ಷರ ಗಾತ್ರ

ಕಲಬುರ್ಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿ ದ್ಯಾಲಯದ ಕುಲ ಪತಿಯಾಗಿ ಹಿರಿಯ ಭಾಷಾವಿಜ್ಞಾನಿ ಹಾಗೂ ಜಾನಪದ ವಿದ್ವಾಂಸ ಪ್ರೊ.ಎಚ್‌. ಎಂ. ಮಹೇಶ್ವರಯ್ಯ ಅವರನ್ನು ರಾಷ್ಟ್ರಪತಿ ನೇಮಕ ಮಾಡಿದ್ದಾರೆ.

2014ರ ಫೆಬ್ರುವರಿ 28ರಂದು ಪ್ರೊ.ಎಸ್.ಎಸ್.ಮೂರ್ತಿ ಅವರ ಅವಧಿ ಮುಕ್ತಾಯವಾಗಿದ್ದರಿಂದ ಈ ಸ್ಥಾನ ತೆರವಾಗಿತ್ತು. ಪ್ರೊ.ಎಂ.ಎನ್‌. ಸುಧೀಂದ್ರ ರಾವ್‌  ಪ್ರಭಾರ ಕುಲಪತಿಯಾಗಿದ್ದರು.

ಪರಿಚಯ: ಪ್ರೊ.ಎಚ್.ಎಂ. ಮಹೇಶ್ವರಯ್ಯ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಹಿತ್ತಲ ಗ್ರಾಮದವರು. ಭಾಷಾ ವಿಜ್ಞಾನ ಹಾಗೂ ಜಾನಪದ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆ ಮಾಡಿ ದ್ದಾರೆ.

ಶಿವಮೊಗ್ಗದ ಸಹ್ಯಾದ್ರಿ ಕಾಲೇ ಜಿನಲ್ಲಿ ಪದವಿ, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1979ರಲ್ಲಿ ಪಿಎಚ್‌. ಡಿ ಪದವಿ ಪಡೆದು, ಧಾರವಾಡ ವಿ.ವಿ ಯಲ್ಲೇ ಅಧ್ಯಾಪಕ, ಪ್ರವಾಚಕ, ಪ್ರಾಧ್ಯಾ +ಪಕ ಮತ್ತು ಕನ್ನಡ ಅಧ್ಯಯನ ಪೀಠದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT