ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಿರಡ್ಡಿ, ವೆಂಕಟೇಶಮೂರ್ತಿ ಆಯ್ಕೆ

ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ
Last Updated 21 ಜನವರಿ 2016, 19:38 IST
ಅಕ್ಷರ ಗಾತ್ರ

ಧಾರವಾಡ: ‘ಇಲ್ಲಿನ ಡಾ. ದ.ರಾ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ನೀಡುವ ಅಂಬಿಕಾತನಯದತ್ತ ಪ್ರಶಸ್ತಿಗೆ ಹಿರಿಯ ವಿಮರ್ಶಕ ಡಾ. ಗಿರಡ್ಡಿ ಗೋವಿಂದರಾಜ ಮತ್ತು ಕವಿ ಎಚ್.ಎಸ್. ವೆಂಕಟೇಶಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ’ ಎಂದು ಟ್ರಸ್ಟ್‌ ಅಧ್ಯಕ್ಷ ಡಾ.ಶ್ಯಾಮಸುಂದರ ಬಿದರಕುಂದಿ ಗುರುವಾರ ಇಲ್ಲಿ ಹೇಳಿದರು.

‘ಪ್ರಶಸ್ತಿ ತಲಾ ₹ 50 ಸಾವಿರ ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಇದೇ 31 ರಂದು  ನಡೆಯಲಿದೆ. ಪ್ರೊ.ಐ.ಜಿ ಸನದಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಬೇಂದ್ರೆಯವರ ಬದುಕು ಮತ್ತು ಸಾಧನೆ ಕುರಿತ ಬೇಂದ್ರೆ ಕಾವ್ಯಾನುಭವ ಕಾರ್ಯಕ್ರಮ  ಫೆ. 1 ರಂದು ನಿಪ್ಪಾಣಿಯಲ್ಲಿ ನಡೆಯಲಿದೆ. ನಂತರ ಇದೇ ರೀತಿಯ ಕಾರ್ಯಕ್ರಮಗಳನ್ನು ಪುಣೆ, ಮುಂಬೈ, ಅಕ್ಕಲಕೋಟೆ ಹಾಗೂ ಸೊಲ್ಲಾಪುರದಲ್ಲಿ ಆಯೋಜಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT