ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌: ವಿವಾದಾತ್ಮಕ ಮಸೂದೆಗೆ ಅನುಮೋದನೆ

Last Updated 31 ಮಾರ್ಚ್ 2015, 11:36 IST
ಅಕ್ಷರ ಗಾತ್ರ

ಗಾಂಧಿನಗರ (ಪಿಟಿಐ): ವಿವಾದಾತ್ಮಕ ‘ಗುಜರಾತ್‌ ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧ (ಜಿಸಿಟಿಒಸಿ) ನಿಯಂತ್ರಣ ಮಸೂದೆ’ಯನ್ನು ಮಂಗಳವಾರ ಗುಜರಾತ್‌ ವಿಧಾನಸಭೆಯಲ್ಲಿ  ಬಹುಮತದ ಮೂಲಕ ಅಂಗೀಕರಿಸಲಾಯಿತು.

ಪೊಲೀಸರಿಗೆ ಆರೋಪಿಗಳ ದೂರವಾಣಿ ಕರೆಗಳ ಧ್ವನಿ ಮುದ್ರಣ ಮಾಡಿಕೊಳ್ಳಲು ಮತ್ತು ಅದನ್ನು ನ್ಯಾಯಾಲಯಕ್ಕೆ ಸಾಕ್ಷ್ಯವಾಗಿ ಒದಗಿಸಲು ಈ ಮಸೂದೆಯು ಅವಕಾಶ ಕಲ್ಪಿಸುತ್ತದೆ.

ಈ ವಿವಾದಾತ್ಮಕ ಮಸೂದೆಯನ್ನು ಮರು ಪರಿಶೀಲಿಸಿ ಎಂದು ಸೂಚಿಸಿ, ರಾಷ್ಟ್ರಪತಿಗಳು ಇದನ್ನು ಮೂರು ಬಾರಿ ರಾಜ್ಯ ಸರ್ಕಾರಕ್ಕೆ  ವಾಪಸ್‌ ಕಳುಹಿಸಿದ್ದರು. ಮಸೂದೆಗೆ ಪ್ರತಿಪಕ್ಷಗಳಿಂದಲೂ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೆ, ಮಂಗಳವಾರ ಬಹುಮತದ ಮೂಲಕ ಮಸೂದೆಗೆ ಅನುಮೋದನೆ ಪಡೆಯುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT