ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯಾಲಲಿತಾ ಬಿಡುಗಡೆ

Last Updated 18 ಅಕ್ಟೋಬರ್ 2014, 11:13 IST
ಅಕ್ಷರ ಗಾತ್ರ

ಬೆಂಗಳೂರು (ಪಿಟಿಐ): ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಎಐಎಡಿಎಂಕೆ ಪಕ್ಷದ ಮುಖ್ಯಸ್ಥೆ ಜೆ.ಜಯಲಲಿತಾ ಅವರು ಶನಿವಾರ ಮಧ್ಯಾಹ್ನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡರು.

ಜಯಲಲಿತಾ ಮತ್ತು ಇತರೆ ಮೂರು ಮಂದಿ ಆಪಾದಿತರಿಗೆ ಸುಪ್ರೀಂಕೋರ್ಟ್‌ ಶುಕ್ರವಾರ ಜಾಮೀನು ನೀಡಿತ್ತು. ಶನಿವಾರ ಬೆಳಿಗ್ಗೆ ಜಾಮೀನು ಆದೇಶದ ಪ್ರತಿಯನ್ನು ಪರಿಶೀಲಿಸಿದ ಬೆಂಗಳೂರಿನ ವಿಶೇಷ ನ್ಯಾಯಾಲಯ ಜಯಲಲಿತಾ ಅವರ ಬಿಡುಗಡೆಗೆ ಆದೇಶ ನೀಡಿತ್ತು.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಪೊಲೀಸ್‌ ಭದ್ರತೆಯಲ್ಲಿ ಎಚ್‌ಎಎಲ್‌ ವಿಮಾನ ನಿಲ್ದಾಣ ತಲುಪಿದ ಜಯಲಲಿತಾ, ವಿಶೇಷ ವಿಮಾನದ ಮೂಲಕ ಚೆನ್ನೈಗೆ ಹೊರಟರು.

ಜಯಲಲಿತಾ ಸಾಗುವ ಮಾರ್ಗದುದ್ದಕ್ಕೂ ರಸ್ತೆಯಲ್ಲಿ ಸಾಲುಗಟ್ಟಿ ನಿಂತಿದ್ದ ಎಐಎಡಿಎಂಕೆ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಜಯಲಲಿತಾ ಅವರಿದ್ದ ಕಾರಿನ ಮೇಲೆ ಹೂ ಚೆಲ್ಲಿ, ಜಯಕಾರ ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT