ನವದೆಹಲಿ (ಪಿಟಿಐ): ಸಾಹಿತಿ ಡಾ. ನಾ. ದಾಮೋದರ ಶೆಟ್ಟಿ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ 2015ನೇ ಸಾಲಿನ ಅನುವಾದ ಬಹುಮಾನಕ್ಕೆ ಪಾತ್ರರಾಗಿದ್ದಾರೆ.
ವಿವಿಧ ಭಾಷೆಗಳ 23 ಲೇಖಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ಕಾರ್ಯಕಾರಿ ಮಂಡಳಿಯು ಒಪ್ಪಿಗೆ ನೀಡಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಅನುವಾದ ಪ್ರಶಸ್ತಿಯು ₹ 50 ಸಾವಿರ ನಗದು, ತಾಮ್ರ ಫಲಕ ಒಳಗೊಂಡಿದೆ.