ನವದೆಹಲಿ (ಪಿಟಿಐ): ನೀರಿನ ಸಮಸ್ಯೆ ಹಾಗೂ ವಿದ್ಯುತ್ ಕಡಿತ ವಿರೋಧಿಸಿ ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಪ್ರತಿಭಟನೆ ಮುಂದುವರಿದಿದ್ದು, ನಾಂಗ್ಲೋಯಿ ರೈಲು ನಿಲ್ದಾಣ ರೈಲು ತಡೆಗೆ ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದರು.

ನಾಂಗ್ಲೋಯಿ ರೈಲು ನಿಲ್ದಾಣದಲ್ಲಿ ರೈಲು ತಡೆಗೆ ಮುಂದಾದ ದೆಹಲಿ ಕಾಂಗ್ರೆಸ್ ಮುಖ್ಯ ವಕ್ತಾರ ಮುಖೇಶ್ ಶರ್ಮಾ, ಹಿರಿಯ ಮುಖಂಡ ಸಜ್ಜನ್ ಕುಮಾರ್ ಮತ್ತು ಹಲವು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆಯಲಾಗಿದೆ.

ಪೊಲೀಸರ ಕ್ರಮಕ್ಕೆ ಕಾಂಗ್ರೆಸ್ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸಮರ್ಪಕ ವಿದ್ಯುತ್ ಮತ್ತು ನೀರಿನ ಪೂರೈಕೆ ಮಾಡುವವರೆಗೂ ನಗರದಲ್ಲಿ ಪ್ರತಿಭಟನೆ ಮುಂದುವರಿಸುವುದಾಗಿ ಕಾಂಗ್ರೆಸ್ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.