ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೊ. ನಾವಡರಿಗೆ ಕನಕಶ್ರೀ

Last Updated 7 ನವೆಂಬರ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: 2014ನೇ ಸಾಲಿನ ಕನಕಶ್ರೀ ಪ್ರಶಸ್ತಿಯು ಹಿರಿಯ ವಿದ್ವಾಂಸ ಪ್ರೊ.ಎ.ವಿ. ನಾವಡ ಅವರಿಗೆ ಸಂದಿದೆ.  ಬೆಂಗ­ಳೂ­ರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ನಡೆ­ಯುವ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.

ಪ್ರಶಸ್ತಿಯು ₨ 5 ಲಕ್ಷ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಕನಕ­ದಾಸರ ಸಾಹಿತ್ಯ, ಜೀವನ ಮತ್ತು ಸಂದೇಶಗಳ ಕುರಿತು ಅನನ್ಯ ಸೇವೆ ಸಲ್ಲಿಸಿದ­ವ­ರನ್ನು ಗೌರವಿಸಲು ಈ ಪ್ರಶಸ್ತಿಯನ್ನು 2008ರಿಂದ ನೀಡಲಾ­ಗು­ತ್ತಿದೆ. ಪ್ರೊ. ನಾವಡರು ಕನ್ನಡ ಮತ್ತು ತುಳು ವಿದ್ವಾಂಸರಾಗಿ ಹೆಸರು ಮಾಡಿದ­ವರು. ಜಾನಪದ ವಿಜ್ಞಾನ, ನಿಘಂಟು ವಿಜ್ಞಾನ ಮತ್ತು ಹರಿದಾಸ ಸಾಹಿತ್ಯ ಕ್ಷೇತ್ರಗ­ಳಲ್ಲೂ ಅವರು ವಿಶೇಷ ಅಧ್ಯಯನ ನಡೆಸಿದ್ದಾರೆ. ಕಡೆಂಗೋಡ್ಲು ಶಂಕರ ಭಟ್ಟರ ಬದುಕು–ಬರಹ ಕುರಿತ ಕೃತಿ ಸೇರಿದಂತೆ ನಲವತ್ತಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT