ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೈರಪ್ಪಗೆ ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ

Last Updated 22 ಜುಲೈ 2014, 19:30 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಡಾ. ಬೆಟಗೇರಿ ಕೃಷ್ಣ ಶರ್ಮ ಸ್ಮಾರಕ ಟ್ರಸ್ಟ್‌ ನೀಡುವ ‘ಡಾ. ಬೆಟಗೇರಿ ಕೃಷ್ಣ ಶರ್ಮ ಕಾದಂಬರಿ ಪ್ರಶಸ್ತಿ’ಗೆ ಪ್ರಸಿದ್ಧ ಕಾದಂಬರಿಕಾರ ಡಾ. ಎಸ್‌. ಎಲ್‌. ಭೈರಪ್ಪ ಆಯ್ಕೆ­ಯಾಗಿದ್ದಾರೆ.

ಪ್ರಶಸ್ತಿಯು ₨ 1 ಲಕ್ಷ ಮೊತ್ತವನ್ನು ಒಳಗೊಂಡಿದೆ. ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ಇದೇ 30ರಂದು ನಡೆಯುವ ಸಮಾರಂಭ­ದಲ್ಲಿ ಹಿರಿಯ ಕವಿ ಚನ್ನವೀರ ಕಣವಿ ಪ್ರಶಸ್ತಿ ಪ್ರದಾನ ಮಾಡುವರು. ಡಾ. ಜಿ.ಬಿ. ಹರೀಶ ಅಭಿ­­ನಂದನಾ ಭಾಷಣ ಮಾಡು­ವರು ಎಂದು ಟ್ರಸ್ಟ್‌ನ ಅಧ್ಯಕ್ಷ ರಾಘ­ವೇಂದ್ರ ಪಾಟೀಲ ಅವರು ಮಂಗಳ­ವಾರ ಪತ್ರಿಕಾ­ಗೋಷ್ಠಿಯಲ್ಲಿ ತಿಳಿಸಿದರು.

ಕಾದಂಬರಿ ವಿಭಾಗದಲ್ಲಿ ಪ್ರಶಸ್ತಿ ನೀಡಲು ಡಾ. ಬಸವರಾಜ ಕಲ್ಗುಡಿ, ಡಾ. ಎಚ್‌.ಎಸ್‌. ರಾಘ­ವೇಂದ್ರ ಹಾಗೂ ಪ್ರೊ. ಓ.ಎಲ್‌. ನಾಗ­ಭೂಷಣಸ್ವಾಮಿ ಅವರನ್ನು ಒಳಗೊಂಡ ಆಯ್ಕೆ ಸಮಿತಿ ರಚಿಸಲಾಗಿತ್ತು. ಈ ಸಮಿತಿಯು ಅವಿರೋಧವಾಗಿ ಭೈರಪ್ಪ ಅವರನ್ನು  ಆಯ್ಕೆ ಮಾಡಿದೆ’ ಎಂದು ಪಾಟೀಲ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT