ಮಂಗಳೂರು(ಪಿಟಿಐ): ರಾಜ್ಯದ ಮಂಗಳೂರು ನಗರ ವಲಯದಲ್ಲೂ ಶನಿವಾರ 30 ಸೆಕೆಂಡುಗಳ ಕಾಲ ಲಘು ಭೂಕಂಪನವಾಗಿದೆ. ಇಲ್ಲಿನ ಬಾವುಟಗುಡ್ಡೆ ಪ್ರದೇಶದಲ್ಲಿ ಬೆಳಿಗ್ಗೆ 11.50ಕ್ಕೆ ಲಘು ಭೂಕಂಪನವಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಂಪನದ ಅನುಭವವಾಗುತ್ತಿದ್ದಂತೆ ಕೆಲ ಕಚೇರಿಗಳಿಂದ ಜನರು ಹೊರಗೆ ಓಡಿ ಬಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಘು ಭೂಕಂಪನದ ತೀವ್ರತೆ ಒಂದರಷ್ಟಿರಬಹುದು. ಆದರೆ, ಈ ಬಗ್ಗೆ ಇನ್ನೂ ದೃಢಪಟ್ಟಿಲ್ಲ. ಯಾವುದೇ ಹಾನಿಯಾದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕ ರಾಮಪ್ಪ ತಿಳಿಸಿದ್ದಾರೆ.

ಮಣಿಪಾಲ ಮತ್ತು ಉಡುಪಿಯಲ್ಲೂ ಲಘು ಭೂಕಂಪನದ ಅನುಭವವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.