ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರಿಗೆ ಗೌರವ ಡಾಕ್ಟರೇಟ್‌

ಮಹಿಳಾ ವಿ.ವಿ. ಘಟಿಕೋತ್ಸವ ನಾಳೆ
Last Updated 1 ಮಾರ್ಚ್ 2015, 19:30 IST
ಅಕ್ಷರ ಗಾತ್ರ

ವಿಜಯಪುರ: ವಿಜ್ಞಾನ ಶಿಕ್ಷಣ, ಅಂಗವಿಕಲರ ಕಲ್ಯಾಣ, ಧಾರ್ಮಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಮೂವರು ಮಹಿಳೆ­ಯರಿಗೆ ರಾಜ್ಯ ಮಹಿಳಾ ವಿಶ್ವ­ವಿದ್ಯಾಲಯ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಲಿದೆ ಎಂದು ವಿ.ವಿ. ಕುಲಪತಿ ಪ್ರೊ. ಮೀನಾ ಆರ್‌. ಚಂದಾವರ­ಕರ ತಿಳಿಸಿದರು.

ಬಸವಾದಿ ಶಿವಶರಣರ ತತ್ವಾದರ್ಶ ಗಳನ್ನು ಜನ ಸಾಮಾನ್ಯರಿಗೆ ತಲುಪಿಸಲು ಶ್ರಮಿಸುತ್ತಿರುವ ಕಲಬುರ್ಗಿಯ ವಿಲಾಸವತಿ ಖೂಬಾ, ವಿಜ್ಞಾನ ಶಿಕ್ಷಣ ಜನಪ್ರಿಯ­ಗೊಳಿಸು­ವಲ್ಲಿ ನಿರತಾಗಿರುವ ಬೆಂಗಳೂರಿನ ಇಂದೂಮತಿ ರಾವ್, ಅಂಗವಿಕಲರ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮಧು ಸಿಂಘಾಲ್ ಅವರಿಗೆ ಗೌರವ ಡಾಕ್ಟರೇಟ್ ನೀಡ­ಲಾಗುವುದು ಎಂದು ಹೇಳಿದರು.

ಇದೇ 3ರಂದು ವಿ.ವಿ.ಯ ಜ್ಞಾನಶಕ್ತಿ ಆವರಣದಲ್ಲಿ ನಡೆಯಲಿರುವ 6ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ಪ್ರದಾನ ಮಾಡುವ ಜತೆಗೆ ಸಾಧಕರಿಗೂ ಪದವಿ ಪ್ರದಾನ ಮಾಡಲಾಗುವುದು ಎಂದು ಭಾನುವಾರ ಪತ್ರಿಕಾಗೋಷ್ಠಿ­ಯಲ್ಲಿ ತಿಳಿಸಿದರು.

ಚಿನ್ನದ ಹುಡುಗಿಯರು: ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‌­ಗಳಲ್ಲಿ ಗರಿಷ್ಠ ಅಂಕಗಳನ್ನು ಗಳಿಸಿ ತೇರ್ಗಡೆಯಾದ 37 ವಿದ್ಯಾರ್ಥಿನಿ­ಯರಿಗೆ 46 ಚಿನ್ನದ ಪದಕ, 23 ವಿದ್ಯಾರ್ಥಿನಿಯರಿಗೆ ಪಿಎಚ್‌.ಡಿ ಪದವಿ, ಏಳು ವಿದ್ಯಾರ್ಥಿನಿಯರಿಗೆ ಎಂ.ಫಿಲ್ ಪದವಿಯನ್ನು ಘಟಿ­ಕೋತ್ಸವ­ದಲ್ಲಿ ಪ್ರದಾನ ಮಾಡಲಾಗುತ್ತದೆ. ಸ್ನಾತಕ, ಸ್ನಾತಕೋತ್ತರ ಹಾಗೂ ಪಿ.ಜಿ ಡಿಪ್ಲೊಮಾ ಸೇರಿ ಒಟ್ಟು 8,622 ವಿದ್ಯಾರ್ಥಿನಿಯರು ಪದವಿ ಪಡೆಯಲು ಅರ್ಹರಾಗಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT