ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಪ್ರಮಾಣ ಸಮಾರಂಭಕ್ಕೆ ಷರೀಫ್‌

Last Updated 24 ಮೇ 2014, 10:48 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌ (ಐಎಎನ್‌ಎಸ್‌): ಭಾರತದ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭದ ಆಹ್ವಾನ ಕುರಿತಂತೆ ಅಂತಿಮ ತೀರ್ಮಾನಕ್ಕೆ ಬರಲಾಗದೆ ಗೊಂದಲದಲ್ಲಿದ್ದ ಪಾಕಿಸ್ತಾನದ ಪ್ರಧಾನಿ ನವಾಜ್‌ ಷರೀಫ್‌ ಅವರು ಸಮಾರಂಭಕ್ಕೆ ಆಗಮಿಸುವುದಾಗಿ ಶನಿವಾರ ಹೇಳಿದ್ದಾರೆ.

ಇದೇ 26ರಂದು (ಸೋಮವಾರ) ನವದೆಹಲಿಯಲ್ಲಿ ನಡೆಯಲಿರುವ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ  ಷರೀಫ್‌ ಅವರು ಭಾಗವಹಿಸಲಿದ್ದಾರೆ ಎಂದು ರೇಡಿಯೊ ಪಾಕಿಸ್ತಾನ ಶನಿವಾರ ತಿಳಿಸಿದೆ.

ಸಮಾರಂಭದಲ್ಲಿ ಪಾಕಿಸ್ತಾನದ ಪ್ರತಿನಿಧಿಯಾಗಿ ಷರೀಫ್‌ ಅವರು ಭಾಗವಹಿಸಲಿದ್ದಾರೆ ಎಂದು ಪ್ರಧಾನಿ ನಿವಾಸದ ವಕ್ತಾರೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT