ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

ಶ್ರೀಗಳ ವಿರುದ್ಧದ ಅತ್ಯಾಚಾರ ಆರೋಪದ ಮೇಲ್ಮನವಿ
Last Updated 6 ಜನವರಿ 2015, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಮಕಥಾ ಗಾಯಕಿ ಮೇಲಿನ ಅತ್ಯಾ­ಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಚಂದ್ರಾ­ಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳ ವಿರುದ್ಧದ ಮೇಲ್ಮನವಿ ವಿಚಾರಣೆಯಿಂದ ನ್ಯಾಯಮೂರ್ತಿ ರಾಮಮೋಹನ ರೆಡ್ಡಿ ಅವರು ಹಿಂದೆ ಸರಿದಿದ್ದಾರೆ.

ತಮ್ಮ ವಿರುದ್ಧ ದಾಖಲಿಸಲಾಗಿರುವ ಅತ್ಯಾಚಾರ ಪ್ರಕರಣವನ್ನು ರದ್ದು ಮಾಡು­ವಂತೆ ಕೋರಿ ಶ್ರೀಗಳು ಸಲ್ಲಿಸಿದ್ದ ರಿಟ್‌ ಅರ್ಜಿ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ, ನ್ಯಾಯಮೂರ್ತಿ ರಾಮ­ಮೋಹನ ರೆಡ್ಡಿ ಅವರಿದ್ದ ವಿಭಾ­ಗೀಯ ಪೀಠವು ಮಂಗಳವಾರ ವಿಚಾರಣೆ ನಡೆಸಿತು.

ಬೆಳಗಿನ ಕಲಾಪದಲ್ಲಿ ಕಕ್ಷಿದಾರ ಶ್ರೀಗಳ ಪರ ವಾದಿಸಿದ ಹಿರಿಯ ವಕೀಲ ಬಿ.ವಿ. ಆಚಾರ್ಯ ಅವರು, ‘ನನ್ನ  ಕಕ್ಷಿ­ದಾರರು ಅತ್ಯಾಚಾರ ಎಸಗಿಲ್ಲ. ಇದೆಲ್ಲಾ ಸುಳ್ಳು ಆರೋಪ’ ಎಂದು ಪ್ರತಿಪಾದಿಸಿದರು.

ಈ ವೇಳೆ, ‘ಸಿಐಡಿ ತನಿಖೆ ಯಾವ ಹಂತದಲ್ಲಿದೆ? ಚಾರ್ಜ್‌ಶೀಟ್‌ ಸಲ್ಲಿಸ­ಲಾ­ಗಿ­ದೆಯೇ? ಸಾಕ್ಷಿಗಳ ವಿಚಾರಣೆ ನಡೆಸಿದ್ದೀರಾ...’ ಎಂಬ ಮುಖ್ಯ ನ್ಯಾಯ­ಮೂರ್ತಿಗಳ ಪ್ರಶ್ನೆಗೆ, ಪ್ರಾಸಿಕ್ಯೂಷನ್ ಪರ ಹಾಜರಾಗಿದ್ದ ಅಡ್ವೊಕೇಟ್‌ ಜನ­ರಲ್‌ ಪ್ರೊ.ರವಿವರ್ಮ ಕುಮಾರ್ ಉತ್ತ­ರಿಸಿ, ‘ಬಾಕಿ ಉಳಿದಿರುವ ವೈದ್ಯಕೀಯ ಪರೀಕ್ಷೆಗೆ ತನಿಖಾಧಿಕಾರಿಗಳ ಜೊತೆ ಸ್ವಾಮೀಜಿ ಸಹಕರಿಸುತ್ತಿಲ್ಲ’ ಎಂದರು.

‘ಈ ಕಾರಣಕ್ಕಾಗಿಯೇ ಸ್ವಾಮೀಜಿಯ­ವರ ನಿರೀಕ್ಷಣಾ ಜಾಮೀನು ರದ್ದು­ಗೊಳಿಸುವಂತೆ ಕೋರಿ ಮನವಿ ಸಲ್ಲಿಸಲಾ­ಗುವುದು’ ಎಂದೂ ಅವರು ನ್ಯಾಯ­ಪೀಠಕ್ಕೆ ವಿವರಿಸಿದರು.

ವಾದ ಪ್ರತಿವಾದ ಆಲಿಸಿದ ಪೀಠವು, ‘ತನಿಖೆ ಎಲ್ಲ ವಿವರಗಳನ್ನು ಒಪ್ಪಿಸಿ’ ಎಂದು ಸೂಚಿಸಿ ಕಲಾಪವನ್ನು ಮಧ್ಯಾಹಕ್ಕೆ ಮುಂದೂಡಿತು. ಆದರೆ ಮಧ್ಯಾಹ್ನ ಪ್ರಕರಣ ವಿಚಾರಣೆಗೆ ಬರು­ತ್ತಿದ್ದಂತೆಯೇ ನ್ಯಾಯಮೂರ್ತಿ ರಾಮ­ಮೋಹನ ರೆಡ್ಡಿ ಅವರು ವಿಚಾರಣೆ­ಯಿಂದ ಹಿಂದೆ ಸರಿಯುತ್ತಿರುವುದಾಗಿ ಪ್ರಕಟಿಸಿದರು.

ಈ ಪ್ರಕರಣದ ಸಂಬಂಧ ಏಕ­ಸದಸ್ಯ ಪೀಠದ ನ್ಯಾ. ಕೆ.ಎನ್.ಫಣೀಂದ್ರ ಅವರೂ ವಿಚಾರಣೆಯಿಂದ ಹಿಂದೆ ಸರಿದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT