ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಾಪಂ ಹಗರಣ: ಕೋರ್ಟ್‌ ನಿರ್ದೇಶಿತ ಸಿಬಿಐ ತನಿಖೆಗೆ

Last Updated 7 ಜುಲೈ 2015, 9:55 IST
ಅಕ್ಷರ ಗಾತ್ರ

ಭೋಪಾಲ್‌ (ಪಿಟಿಐ): ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ವ್ಯಾಪಂ ಹಗರಣವನ್ನು ಕೋರ್ಟ್‌ ನಿರ್ದೇಶಿತ ಸಿಬಿಐ ತನಿಖೆಗೆ ಒಪ್ಪಿಸಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಮಂಗಳವಾರ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ವ್ಯಾಪಂ ಹಗರಣವನ್ನು ಕೋರ್ಟ್‌ ನಿರ್ದೇಶಿತ ಸಿಬಿಐ ತನಿಖೆಗೆ ವಹಿಸಲಾಗುವುದು. ಈ ಸಂಬಂಧ ಹೈಕೋರ್ಟ್‌ಗೆ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ವ್ಯಾಪಂ ಹಗರಣಕ್ಕೆ ಸಂಬಂಧಪಟ್ಟಂತೆ ನಿಗೂಢವಾಗಿ ಮೃತಪಟ್ಟಿರುವವರ ಪ್ರಕರಣಗಳನ್ನೂ ಸಿಬಿಐ ತನಿಖೆಗೆ ವಹಿಸಲಾಗುವುದು ಎಂದು ಶಿವರಾಜ್‌ ಸಿಂಗ್‌ ಚೌಹಾಣ್‌ ತಿಳಿಸಿದರು.

ರಾಜ್ಯದ ಜನರ ಭಾವನೆಗಳಿಗೆ ಬೆಲೆ ಕೊಟ್ಟು ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗುತ್ತಿದೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.

ವ್ಯಾಪಂ ಹಗರಣದಲ್ಲಿ ಮುಖ್ಯಮಂತ್ರಿಗಳ ಪಾತ್ರ ಇದೆ ಎಂಬ ಕಾಂಗ್ರಸ್‌ ಆರೋಪವನ್ನು ಶಿವರಾಜ್‌ಸಿಂಗ್‌ ಚೌಹಾಣ್‌ ತಳ್ಳಿಹಾಕಿದ ಅವರು, ಕಾಂಗ್ರೆಸ್‌ ಆರೋಪದಲ್ಲಿ ಹುರುಳಿಲ್ಲ ಎಂದರು.

ಇದೇ ವೇಳೆ ಸಿಬಿಐ ತನಿಖೆಗೆ ನಿರ್ದೇಶನ ನೀಡುವಂತೆ ಸರ್ಕಾರ ಹೈಕೋರ್ಟ್‌ಗೂ ಮನವಿ ಸಲ್ಲಿಸಲಿದೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT