ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿ ವಿವಿ ಕುಲಪತಿ ಹುದ್ದೆಗೆ ಮೂವರ ಹೆಸರು ಶಿಫಾರಸು

Last Updated 17 ಆಗಸ್ಟ್ 2015, 19:30 IST
ಅಕ್ಷರ ಗಾತ್ರ

ಬೆಂಗಳೂರು: ಹಂಪಿ ಕನ್ನಡ ವಿವಿ ಕುಲಪತಿ ಹುದ್ದೆಗೆ‌‌ಬೆಂಗಳೂರು ವಿವಿಯ ಹಿರಿಯ ಪ್ರಾಧ್ಯಾಪಕ ಬಸವರಾಜ ಕಲ್ಗುಡಿ, ಕುವೆಂಪು ವಿವಿ ರಿಜಿಸ್ಟ್ರಾರ್‌  ಮಲ್ಲಿಕಾ ಘಂಟಿ  ಮತ್ತು ಮೈಸೂರು ವಿವಿ ಹಿರಿಯ ಪ್ರಾಧ್ಯಾಪಕ ಸಿ.ಪಿ. ಸಿದ್ಧಾಶ್ರಮ ಅವರ ಹೆಸರುಗಳನ್ನು ಶೋಧನಾ ಸಮಿತಿ ಅಂತಿಮಗೊಳಿಸಿದೆ.

ಪ್ರೊ. ಸಿದ್ದಲಿಂಗಯ್ಯ  ನೇತೃತ್ವದಲ್ಲಿ ಸೋಮವಾರ ನಡೆದ ಸಮಿತಿ ಸಭೆ, ಈ ಪಟ್ಟಿಯನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ. ಇವರಲ್ಲಿ ಒಬ್ಬರ ಹೆಸರನ್ನು ಸೂಚಿಸಿ ಮುಖ್ಯಮಂತ್ರಿ ಅವರು ರಾಜ್ಯಪಾಲರಿಗೆ ಕಳುಹಿಸುತ್ತಾರೆ.
ಅಂತಿಮವಾಗಿ ರಾಜ್ಯಪಾಲರು ಕುಲಪತಿ ಆಯ್ಕೆ ಮಾಡಲಿದ್ದಾರೆ. ಈ ಹುದ್ದೆಗೆ ಒಟ್ಟು 25 ಅರ್ಜಿಗಳು ಬಂದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT