ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಕಿ: ಬಂಗಾರ ಗೆದ್ದ ಭಾರತ

Last Updated 2 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ಇಂಚೆನ್‌: ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ ಮಣಿಸಿದ ಭಾರತ ಪುರುಷರ ಹಾಕಿ ತಂಡವು 16 ವರ್ಷಗಳ ಬಳಿಕ ಏಷ್ಯನ್‌ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದುಕೊಂಡಿತು. ಈ ಮೂಲಕ 2016ರಲ್ಲಿ ರಿಯೊ ಡಿ ಜನೈರೊದಲ್ಲಿ ನಡೆಯಲಿ­ರುವ ಒಲಿಂಪಿಕ್ಸ್‌ಗೆ ನೇರ ಅರ್ಹತೆ ಪಡೆಯಿತು.

ಗುರುವಾರ ನಡೆದ ಫೈನಲ್‌ನಲ್ಲಿ ಉಭಯ ತಂಡಗಳು ನಿಗದಿತ ಅವಧಿಯಲ್ಲಿ 1–1 ಗೋಲುಗಳಿಂದ ಸಮಬಲ ಸಾಧಿಸಿದ್ದವು. ಆದರೆ, ಪೆನಾಲ್ಟಿ ಶೂಟೌಟ್‌ನಲ್ಲಿ ಭಾರತ 4–2ರಲ್ಲಿ ಗೆಲುವು ಪಡೆಯಿತು.

ರಿಲೇಯಲ್ಲಿ ಚಿನ್ನ: ಕರ್ನಾಟಕದ ಎಂ.ಆರ್. ಪೂವಮ್ಮ ಅವರನ್ನೊಳ­ಗೊಂಡ ಭಾರತದ ಮಹಿಳಾ  ತಂಡ 4X400ಮೀ. ರಿಲೇಯಲ್ಲಿ ಚಿನ್ನ ಜಯಿಸಿತು. ಗುರುವಾರ ಭಾರತ ಒಟ್ಟು ಐದು ಪದಕಗಳನ್ನು ಗೆದ್ದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT