ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದೆ ಸರಿದ ನ್ಯಾಯಮೂರ್ತಿ

ರಾಘವೇಶ್ವರ ಪ್ರಕರಣ
Last Updated 13 ನವೆಂಬರ್ 2014, 19:52 IST
ಅಕ್ಷರ ಗಾತ್ರ

ಬೆಂಗಳೂರು: ಅತ್ಯಾಚಾರದ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಪ್ರಕರಣದ ವಿಚಾರಣೆಯಿಂದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರಿದ್ದ ಏಕಸದಸ್ಯ ಪೀಠವು ಹಿಂದೆ ಸರಿದಿದೆ.

ಗುರುವಾರ ಪ್ರಕರಣದ ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಕೆ.ಜಿ.ರಾಘವನ್‌ ಅವರು, ‘ನೊಂದ ಮಹಿಳೆ ರಾಮಕಥಾ ಗಾಯಕಿಯು ರಾಷ್ಟ್ರಪತಿ ಅವರಿಗೆ ಪತ್ರ ಬರೆದಿದ್ದಾರೆ. ಈ ನ್ಯಾಯಾಲಯದ ಮೇಲೆ ವಿಶ್ವಾಸ ಇಲ್ಲ ಎಂದು ದೂರಿದ್ದಾರೆ. ಇದರಿಂದ ಅರ್ಜಿದಾರರಿಗೆ ತುಂಬಾ ಬೇಸರ­ವಾಗಿದೆ’ ಎಂದರು.

ಈ ಮಾತಿಗೆ ದನಿಗೂಡಿಸಿದ ನ್ಯಾಯಮೂರ್ತಿಗಳು ‘ನನಗೂ ಇದರಿಂದ ಬೇಸರವಾಗಿದೆ. ನಾನು ಈ ಪ್ರಕರಣದ ವಿಚಾರಣೆ ನಡೆಸುವುದಿಲ್ಲ’ ಎಂದು ಹೇಳಿ ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಘೋಷಿಸಿದರು.

ಅಡ್ವೊಕೇಟ್‌ ಜನರಲ್‌ ಪ್ರೊ.ರವಿ­ವರ್ಮ ಕುಮಾರ್‌ ಮಧ್ಯ ಪ್ರವೇಶಿಸಿ, ‘ನ್ಯಾಯಮೂರ್ತಿಗಳು ವಿಚಾರಣೆ ಮುಂದುವರಿಸಬೇಕು. ಹಿಂದೆ ಸರಿಯ­ಬಾರದು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT