ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎತ್ತಿನಹೊಳೆಗೆ ಪ್ರತ್ಯೇಕ ನಿಗಮ’

Last Updated 24 ಜನವರಿ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಎತ್ತಿನಹೊಳೆ ಯೋಜನೆ­­­­ಗಾಗಿ ಪ್ರತ್ಯೇಕವಾದ ನೀರಾವರಿ ನಿಗಮ ಸ್ಥಾಪಿಸಲು ಸರ್ಕಾರ ಚಿಂತಿಸು­ತ್ತಿದೆ’ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಶುಕ್ರವಾರ ವಿಧಾನ ಪರಿಷತ್ತಿಗೆ ತಿಳಿಸಿದರು.

ಪಶ್ಚಿಮ ಘಟ್ಟಗಳಿಂದ ಬಯಲು­ಸೀಮೆ ಜಿಲ್ಲೆಗಳಿಗೆ ನೀರು ಹರಿಸುವ ಸಂಬಂಧ ಬಿಜೆಪಿಯ ವೈ.ಎ. ನಾರಾಯಣ­ಸ್ವಾಮಿ ಅವರ ಗಮನ ಸೆಳೆಯುವ ಸೂಚನೆಗೆ ಅವರು ಉತ್ತರ ನೀಡಿದರು.

‘ವಿವರವಾದ ಯೋಜನಾ ವರದಿ ಸಿದ್ಧಪಡಿಸಲು ಜಿ.ಎಸ್‌. ಪರಮ­ಶಿವಯ್ಯ ಅವರ ನೇತೃತ್ವದ ತಜ್ಞರ ಸಮಿತಿ­ಯಿಂದ ಸಲಹೆ ಪಡೆಯ­ಲಾಗಿದೆ. ಮಾಲಾ ಕಾಲುವೆ ನಿರ್ಮಾ­ಣದ ಬದಲು ಲಾಳಿಕೆ ಹಾಗೂ ಸುರಂಗ ಮಾರ್ಗ ನಿರ್ಮಾಣದ ಮೂಲಕ ನೀರು ಪಡೆ­ಯುವ ಪ್ರಸ್ತಾವ ಬಂದಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT