ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Budget 2024: ಹಲವು ಜಿಲ್ಲೆಗಳಿಗೆ ವಿಶೇಷ ಕೊಡುಗೆ...

Published 17 ಫೆಬ್ರುವರಿ 2024, 0:30 IST
Last Updated 17 ಫೆಬ್ರುವರಿ 2024, 0:30 IST
ಅಕ್ಷರ ಗಾತ್ರ

ಶಿವಮೊಗ್ಗ

  • ಸೋಗಾನೆಯಲ್ಲಿ ಆಹಾರ ಪಾರ್ಕ್‌

  • ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ

  • ಕೇಂದ್ರ ಸರ್ಕಾರದ ಸಹಯೋಗದಲ್ಲಿ ವಿಜ್ಞಾನ ಕೇಂದ್ರ/ತಾರಾಲಯ

  • ಜಿಲ್ಲೆಯಲ್ಲಿ ₹100 ಕೋಟಿ ವೆಚ್ಚದಲ್ಲಿ ಹೊಸ ಹೈ-ಸೆಕ್ಯೂರಿಟಿ ಕಾರಾಗೃಹ

ಬೆಂಗಳೂರು ಗ್ರಾಮಾಂತರ

  • ಪೂಜೇನಹಳ್ಳಿಯಲ್ಲಿ ಆಹಾರ ಪಾರ್ಕ್‌

  • ಆನೇಕಲ್‌, ನೆಲಮಂಗಲ, ಹೊಸಕೋಟೆಗೆ ತಾಲ್ಲೂಕು ಆಸ್ಪತ್ರೆ

ಬೆಂಗಳೂರು

  • ಅಂತರರಾಷ್ಟ್ರೀಯಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ (ಸಾರ್ವಜನಿಕ– ಖಾಸಗಿ ಸಹಭಾಗಿತ್ವ)

  • ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು ₹500 ಕೋಟಿ ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿ

  • ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಮೂಲಸೌಕರ್ಯ ಕಾಮಗಾರಿಗೆ ₹150 ಕೋಟಿ

  • ಬೆಂಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ ₹20 ಕೋಟಿ ವೆಚ್ಚದಲ್ಲಿ ರೋಬೋಟಿಕ್ ಯಂತ್ರದ ಮೂಲಕ ಉತ್ತಮ ಶಸ್ತ್ರಚಿಕಿತ್ಸೆ ನೀಡಲು ವ್ಯವಸ್ಥೆ

  • ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪದ್ಮಶ್ರೀ ಡಾ. ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ ಅಧ್ಯಯನ ಪೀಠ

  • ಬೆಂಗಳೂರು ಪೂರ್ವ ಭಾಗದಲ್ಲಿ ₹10 ಕೋಟಿ ವೆಚ್ಚದಲ್ಲಿ 500 ಸಂಖ್ಯೆಯ ನಿರಾಶ್ರಿತರ ಪರಿಹಾರ ಕೇಂದ್ರ

  • ಬೆಂಗಳೂರಿನ ಉತ್ತರ ತಾಲ್ಲೂಕಿನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕ್ರೀಡಾ ನಗರ

  • ಬೆಂಗಳೂರು ನಗರದಲ್ಲಿ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ₹233 ಕೋಟಿ ವೆಚ್ಚದಲ್ಲಿ ವಿಜ್ಞಾನ ನಗರಿ

  • ಬೆಂಗಳೂರಿನ ಪೊಲೀಸ್ ಸುಲಿವನ್ ಮೈದಾನದಲ್ಲಿ ₹3 ಕೋಟಿ ವೆಚ್ಚದಲ್ಲಿ ಆಸ್ಟ್ರೋ ಟರ್ಫ್ ಹಾಕಿ ಪ್ರಾಂಗಣ

ದಕ್ಷಿಣ ಕನ್ನಡ

  • ಅಂತರರಾಷ್ಟ್ರೀಯ ಕ್ರೂಸ್ ಮತ್ತು ಪ್ರವಾಸೋದ್ಯಮ ಬಂದರು ಅಭಿವೃದ್ಧಿಪಡಿಸಲು ಐಐಟಿ ಮದ್ರಾಸ್ ಸಹಯೋಗದಲ್ಲಿ ಕಾರ್ಯಸಾಧ್ಯತಾ ವರದಿ ತಯಾರಿ

  • ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಮಾರುಕಟ್ಟೆಯಲ್ಲಿ ₹35 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ

  • ಮಂಗಳೂರಿನ ಗುರುಪುರ ಮತ್ತು ನೇತ್ರಾವತಿ ನದಿಗಳಲ್ಲಿ ಜಲ ಮೆಟ್ರೊ ಸೇವೆ ಪರಿಚಯಿಸಲು ಕಾರ್ಯಸಾಧ್ಯತಾ ವರದಿ ತಯಾರಿಸಲಾಗುವುದು

ಮಂಡ್ಯ

ವಿ.ಸಿ. ಫಾರಂನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚನೆ

ಚಿಕ್ಕಮಗಳೂರು

ಸಾರ್ವಜನಿಕ– ಖಾಸಗಿ ಸಹಭಾಗಿತ್ವದಲ್ಲಿ ಸ್ಪೈಸ್‌ ಪಾರ್ಕ್‌

ವಿಜಯಪುರ

  • ಇಟ್ಟಂಗಿಹಾಳದಲ್ಲಿ ಆಹಾರ ಪಾರ್ಕ್‌

  • ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲಾಭಿವೃದ್ಧಿ ಕೇಂದ್ರ ಸ್ಥಾಪನೆ

  • ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ

ಉತ್ತರ ಕನ್ನಡ

  • ಹೊನ್ನಾವರ ತಾಲ್ಲೂಕಿನ ಮಂಕಿ/ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ

  • ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಸುಸಜ್ಜಿತ ಮೀನುಗಾರಿಕೆ ಬಂದರು ನಿರ್ಮಾಣ

  • ಮಂಕಿಯಲ್ಲಿ ವಿವಿಧೋದ್ದೇಶ ಬಂದರಿನ ಅಭಿವೃದ್ಧಿಗೆ ಕಾರ್ಯಸಾಧ್ಯತಾ ವರದಿ

  • ಗೋಕಾಕ ಜಲಪಾತ ಅಭಿವೃದ್ಧಿ

ಚಿತ್ರದುರ್ಗ

ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ ತಾಲ್ಲೂಕುಗಳ ಗಣಿಬಾಧಿತ ಪ್ರದೇಶದಲ್ಲಿ ಮೀನುಗಾರಿಕೆಗೆ ₹6 ಕೋಟಿ ವೆಚ್ಚ

ಮೈಸೂರು

  • ಹ್ಯೂಮನ್‌ ಮಿಲ್ಕ್‌ ಬ್ಯಾಂಕ್‌ ಸ್ಥಾಪನೆ

  • ಮೈಸೂರಿನ ಪ್ರಖ್ಯಾತ ಲ್ಯಾನ್ಸ್‌ಡೌನ್‌ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಯನ್ನು ಪಾರಂಪರಿಕ ಶೈಲಿಯಲ್ಲಿ ಅಭಿವೃದ್ಧಿ

  • ಮೈಸೂರು ಮಾರುಕಟ್ಟೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್‌ಜಿ ಪ್ಲಾಂಟ್‌ ಸ್ಥಾಪಿಸಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಯಾಗಿ ಪರಿವರ್ತನೆ 

  • ಕೆಆರ್‌ಎಸ್‌ ಅಣೆಕಟ್ಟೆಯ ಬೃಂದಾವನ ಉದ್ಯಾನವನ ವಿಶ್ವದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವಾಗಿ ಉನ್ನತೀಕರಣ

  • ಇಂಟಿಗ್ರೇಟೆಡ್ ಟೌನ್‌ಶಿಪ್‌ ಅಭಿವೃದ್ಧಿ

ಹಾವೇರಿ

ರಾಣೆಬೆನ್ನೂರಿನಲ್ಲಿ ₹112 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 222 ಎಕರೆ ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ಆರಂಭ

ಕೊಪ್ಪಳ

ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು ₹100 ಕೋಟಿ

ಗದಗ

  • ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ₹10 ಕೋಟಿ ವೆಚ್ಚ ಕಾಥಲ್ಯಾಬ್ ಸೌಲಭ್ಯದೊಂದಿಗೆ ಸೂಪರ್‌ ಸ್ಪೆಷಾಲಿಟಿ ಕಾರ್ಡಿಯಾಕ್‌ ಯುನಿಟ್‌ ಆರಂಭ  

  • ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ

ಕೊಡಗು

  • ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಪಿ ಮಾದರಿಯಲ್ಲಿ ಕಾರ್ಡಿಯಾಕ್‌ ಯುನಿಟ್‌

  • ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವೈರಲ್‌ ರಿಸರ್ಚ್‌ ಆ್ಯಂಡ್‌ ಡೈಯಾಗ್ನೊಸ್ಟಿಕ್‌ ಲ್ಯಾಬೊರೇಟರಿ

ಬಳ್ಳಾರಿ

  • ಬಳ್ಳಾರಿಯಲ್ಲಿ ಜೀನ್ಸ್ ಅಪಾರೆಲ್ ಪಾರ್ಕ್ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ ಅಭಿವೃದ್ಧಿ

  • ಬಳ್ಳಾರಿ ಮಾರುಕಟ್ಟೆಯಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್‌ಜಿ ಪ್ಲಾಂಟ್‌ ಸ್ಥಾಪಿಸಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಯಾಗಿ ಪರಿವರ್ತನೆ

  • ಬಳ್ಳಾರಿಯಲ್ಲಿ ಹ್ಯೂಮನ್‌ ಮಿಲ್ಕ್‌ ಬ್ಯಾಕ್‌

  • ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿ ಸ್ಥಾಪನೆ

  • ಬಳ್ಳಾರಿ ನಗರ ಸಮೀಪ ಇಂಟಿಗ್ರೇಟೆಡ್ ಟೌನ್‌ಶಿಪ್‌

ಧಾರವಾಡ

  • ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್‌ಜಿ ಪ್ಲಾಂಟ್‌ ಸ್ಥಾಪಿಸಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಯಾಗಿ ಪರಿವರ್ತನೆ 

  • ಬೆಣ್ಣೆಹಳ್ಳದಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ ಯೋಜನೆ

  • ಹುಬ್ಬಳ್ಳಿ-ಧಾರವಾಡದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್‌

ಕೋಲಾರ

  • ಕೋಲಾರ ಮಾರುಕಟ್ಟೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್‌ಜಿ ಪ್ಲಾಂಟ್‌ ಸ್ಥಾಪಿಸಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಯಾಗಿ ಪರಿವರ್ತನೆ 

  • ಕೆಜಿಎಫ್‌ ಬಳಿ ಇಂಟಿಗ್ರೇಟೆಡ್ ಟೌನ್‌ಶಿಪ್‌

ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್‌ಜಿ ಪ್ಲಾಂಟ್‌ ಸ್ಥಾಪಿಸಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಯಾಗಿ ಪರಿವರ್ತನೆ 

ಬೆಳಗಾವಿ

  • ಬೆಳಗಾವಿಯ ಮಾರುಕಟ್ಟೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್‌ಜಿ ಪ್ಲಾಂಟ್‌ ಸ್ಥಾಪಿಸಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಯಾಗಿ ಪರಿವರ್ತನೆ

  • ಬೆಳಗಾವಿಯಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್‌

ಚಿಕ್ಕಮಗಳೂರು

ಶೃಂಗೇರಿಗೆ ತಾಲ್ಲೂಕು ಆಸ್ಪತ್ರೆ

ಚಾಮರಾಜನಗರ

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಖಾದಿ ಚಟುವಟಿಕೆ ಪ್ರೋತ್ಸಾಹಕ್ಕೆ ಕ್ರಮ

ಕಲಬುರಗಿ

  • ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕ ಸ್ಥಾಪನೆ

  • ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಜಿಟಿಟಿಸಿ ಬಹು ಕೌಶಲ ಅಭಿವೃದ್ಧಿ ಕೇಂದ್ರ

  • ಕಲಬುರಗಿಯ ಕೆಜಿಟಿಟಿಐನಲ್ಲಿ ಕಂಪ್ಯೂಟರ್‌ ನ್ಯುಮರಿಕಲ್‌ ಕಂಟ್ರೋಲ್‌ ಯಂತ್ರವನ್ನು ₹16 ಕೋಟಿ ವೆಚ್ಚದಲ್ಲಿ ಕೇಂದ್ರೀಕರಿಸುವ ಮೊದಲ ಶ್ರೇಷ್ಠತಾ ಕೇಂದ್ರ

  • ಕಲಬುರಗಿಯಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್‌

ಬೀದರ್‌

ಶ್ರೀ ನಾನಕ್‌ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗೆ ₹1 ಕೋಟಿ

ಚಿತ್ರದುರ್ಗ

ಜಿಲ್ಲಾ ಖನಿಜ ನಿಧಿಯ ಮೂಲಕ  ಹೊಸ ಜಿಟಿಟಿಸಿ ಆರಂಭ

ತುಮಕೂರು

ವಸಂತನರಸಾಪುರ ಸಮೀಪದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್‌

ರಾಯಚೂರು

  • ₹25 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಒಣಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ

  • ಹ್ಯೂಮನ್‌ ಮಿಲ್ಕ್‌ ಬ್ಯಾಂಕ್‌ ಸ್ಥಾಪನೆ

  • ವಿಮಾನ ನಿಲ್ದಾಣ ಅಗತ್ಯ ಅನುದಾನ

  • ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಬಳಿ  ₹158 ಕೋಟಿ ವೆಚ್ಚದಲ್ಲಿ ಬ್ರಿಡ್ಜ್-ಕಂ-ಬ್ಯಾರೇಜ್

ವಿಜಯಪುರ

* ಬಸವನಬಾಗೇವಾಡಿಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಶೀತಲಗೃಹ

–––

ಮೈಸೂರು

* ₹40 ಕೋಟಿ ವೆಚ್ಚದಲ್ಲಿ ಶೀತಲಗೃಹ

–––

ಹಾವೇರಿ

* ರಾಣೆಬೆನ್ನೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಶೀತಲಗೃಹ

–––

ಕೊಪ್ಪಳ

* ಯಲಬುರ್ಗಾದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಶೀತಲಗೃಹ

––––

ಗದಗ

* ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಶೀತಲಗೃಹ

–––

ಬಳ್ಳಾರಿ

* ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಶೀತಲಗೃಹ

–––

ರಾಯಚೂರು

₹ 40 ಕೋಟಿ ವೆಚ್ಚದಲ್ಲಿ ಶೀತಲಗೃಹ

ಆರು ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ತಾರಾಲಯ ಸ್ಥಾಪನೆ

ಶಿವಮೊಗ್ಗ, ಕೊಪ್ಪಳ, ಮೈಸೂರು, ಚಿಕ್ಕಮಗಳೂರು, ರಾಯಚೂರು ಮತ್ತು ಯಾದಗಿರಿಯಲ್ಲಿ ಕೇಂದ್ರ ಸರ್ಕಾರದ ಸಹಯೋಗದಲ್ಲಿ ವಿಜ್ಞಾನ ಕೇಂದ್ರ/ತಾರಾಲಯ ಸ್ಥಾಪನೆ

ಆಯ್ದ ಜಿಲ್ಲೆಗಳಲ್ಲಿ ’ಕಿಸಾನ್‌ ಮಾಲ್‌’

ತೋಟಗಾರಿಕೆ

*ಆಯ್ದ ಜಿಲ್ಲೆಗಳಲ್ಲಿ ‘ಕಿಸಾನ್‌ ಮಾಲ್‌’ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.  ತೋಟಗಾರಿಕೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ ಮಾಹಿತಿಗಳೊಂದಿಗೆ ಬೇಸಾಯ ಪರಿಕರಗಳ ಮತ್ತು ಉತ್ಪನ್ನಗಳೂ ಈ ಮಾಲ್‌ಗಳಲ್ಲಿ ಲಭ್ಯ ಇರಲಿವೆ

*ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ

*ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ರಫ್ತು ಪ್ರಮಾಣ ಹೆಚ್ಚಿಸಲು ಕೊಯ್ಲೋತ್ತರ ನಿರ್ವಹಣಾ ಕೇಂದ್ರ

*ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು 

ಪಶುಸಂಗೋಪನೆ

l ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲು ₹10 ಕೋಟಿ ಮೀಸಲು

l ಬಾಡಿಗೆ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 200 ಪಶುವೈದ್ಯ ಸಂಸ್ಥೆಗಳಿಗೆ ₹10 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡಗಳು

ಮೀನುಗಾರಿಕೆ

*₹7 ಕೋಟಿ ವೆಚ್ಚದಲ್ಲಿ ಪ್ರಥಮ ಸಮುದ್ರ ಆಂಬುಲೆನ್ಸ್‌ ಖರೀದಿ 

*ನಬಾರ್ಡ್‌ ಸಹಯೋಗದಲ್ಲಿ ₹20 ಕೋಟಿ ವೆಚ್ಚದಲ್ಲಿ 16 ಮೀನುಮರಿ ಉತ್ಪಾದನಾ ಕೇಂದ್ರಗಳ ಉನ್ನತೀಕರಣ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT