ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಸು ಕಳೇಬರ ಇಟ್ಟು ಪುರಸಭೆ ಮುಂದೆ ಪ್ರತಿಭಟನೆ

Published 13 ಡಿಸೆಂಬರ್ 2023, 14:26 IST
Last Updated 13 ಡಿಸೆಂಬರ್ 2023, 14:26 IST
ಅಕ್ಷರ ಗಾತ್ರ

ಮಹಾಲಿಂಗಪುರ: ಪಟ್ಟಣದ ಮಹಾಲಿಂಗೇಶ್ವರ ಗೋಶಾಲೆಯಲ್ಲಿರುವ ಹಸುವೊಂದು ಬೀದಿನಾಯಿಗಳ ಕಡಿತದಿಂದ ಸಾವಿಗೀಡಾಗಿದ್ದರಿಂದ ಆಕ್ರೋಶಗೊಂಡ ಸಾರ್ವಜನಿಕರು ಬೀದಿನಾಯಿಗಳ ಉಪಟಳ ನಿಯಂತ್ರಿಸಬೇಕು ಎಂದು ಆಗ್ರಹಿಸಿ ಪುರಸಭೆ ಆವರಣದಲ್ಲಿ ಬುಧವಾರ ಹಸು ಕಳೇಬರ ಇಟ್ಟು ಪ್ರತಿಭಟನೆ ನಡೆಸಿದರು.

ಮಹಾಲಿಂಗೇಶ್ವರ ಗೋಶಾಲೆ ಸಂರಕ್ಷಣೆ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಸಾರ್ವಜನಿಕರು, ಪುರಸಭೆಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಮೇಲಿಂದ ಮೇಲೆ ಗೋಶಾಲೆಯಲ್ಲಿರುವ ಹಸುಗಳು ಬೀದಿನಾಯಿಗಳ ಕಡಿತದಿಂದ ಸಾವಿಗೀಡಾಗುತ್ತಿವೆ. ಎರಡು ದಿನದಲ್ಲಿ ಸಮಸ್ಯೆ ಪರಿಹರಿಸಬೇಕು. ಇಲ್ಲದಿದ್ದರೆ ಗೋಶಾಲೆಯಲ್ಲಿರುವ ಹಸುಗಳನ್ನು ಪುರಸಭೆ ಆವರಣದಲ್ಲಿ ಕಟ್ಟಲಾಗುವುದು ಎಂದು ಎಚ್ಚರಿಸಿದರು.

ಪುರಸಭೆ ವ್ಯವಸ್ಥಾಪಕ ಎಸ್.ಎನ್.ಪಾಟೀಲ ಮನವಿ ಸ್ವೀಕರಿಸಿ ಮಾತನಾಡಿ, ಶೀಘ್ರ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು. ಮಹಾಲಿಂಗೇಶ್ವರ ಮಠದ ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಮಹಾಲಿಂಗೇಶ್ವರ ಗೋಶಾಲೆ ಸಂರಕ್ಷಣೆ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT