ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ಸುಳ್ಳು ಭರವಸೆ: ಕಾಶಪ್ಪನವರ

ಕಂದಗಲ್‌: ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತಾ ಪಾಟೀಲ ಪರ ಮತಯಾಚನೆ
Published 3 ಮೇ 2024, 15:47 IST
Last Updated 3 ಮೇ 2024, 15:47 IST
ಅಕ್ಷರ ಗಾತ್ರ

ಇಳಕಲ್‌: ಸಮೀಪದ ಕಂದಗಲ್ ಗ್ರಾಮದಲ್ಲಿ ಕಂದಗಲ್‌ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಹಾಗೂ ಅಭ್ಯರ್ಥಿ ಸಂಯುಕ್ತಾ ಪಾಟೀಲ ಮತಯಾಚಿಸಿದರು.

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ, ‘ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಹಾಗೂ ನರೇಂದ್ರ ಮೋದಿ ಸುಳ್ಳು ಭರವಸೆ ಕೊಟ್ಟು ಜನರಿಗೆ ಮಂಕು ಬೂದಿ ಎರಚಿರುವುದು ಈಗ ಜನರಿಗೆ ಅರಿವಿಗೆ ಬಂದಿದೆ. ಇಲ್ಲಿಯ ಸಂಸದರು 20 ವರ್ಷದಲ್ಲಿ ಯಾವುದೇ ಕೊಡುಗೆ ಕೊಟ್ಟಿಲ್ಲ. ಇದೆಲ್ಲವನ್ನು ಗಮನಿಸಿ ಮತದಾರರು ಈ ಬಾರಿ ಕಾಂಗ್ರೆಸ್‌ನ್ನು ಗೆಲ್ಲಿಸುವುದು ನಿಶ್ಚಿತʼ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಮಾತನಾಡಿ, ‘ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ನನ್ನಲ್ಲಿ ನೀಲನಕ್ಷೆ ಇದೆ. ಸಂಸದಳಾಗಿ ಆಯ್ಕೆ ಮಾಡಿದರೆ ಹಿಂದಿನ ಸಂಸದರಂತೆ ಕಾಲಹರಣ ಮಾಡದೇ ಬಾಗಲಕೋಟೆಗೆ ಕ್ಷೇತ್ರಕ್ಕೆ ಕೇಂದ್ರದ ಯೋಜನೆಗಳನ್ನು ಮಂಜೂರು ಮಾಡಿಸಿ, ಮಾದರಿ ಕ್ಷೇತ್ರವಾಗಿ ರೂಪಿಸುವೆ. ಈ ಬಾರಿ ಕಾಂಗ್ರೆಸ್‌ ಪಕ್ಷಕ್ಕೆ ಅವಕಾಶ ಕೊಡಿ’ ಎಂದು ಮನವಿ ಮಾಡಿದರು.

ಇಳಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾಕ್ ತಟಗಾರ, ಕೆಪಿಸಿಸಿ ಸದಸ್ಯ ಶಾಂತಕುಮಾರ ಸುರಪುರ, ಕೆಪಿಸಿಸಿ ಉಸ್ತುವಾರಿ ನಿಸಾರ್ ಅಹಮದ್ ಖಾಜಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೆಂಕಟೇಶ ಸಾಕಾ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರಣಪ್ಪ ಆಮದಿಹಾಳ, ಇಳಕಲ್ ತಾಲೂಕಾ ಕಿಸಾನ್ ಘಟಕದ ಅಧ್ಯಕ್ಷ ಚನ್ನಪ್ಪಗೌಡ ನಾಡಗೌಡ, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ವಿಜಯಮಹಾಂತೇಶ ಗದ್ದನಕೇರಿ, ಮಹಿಳಾ ಘಟಕದ ಅಧ್ಯಕ್ಷೆ ಸರಸ್ವತಿ ಈಟಿ, ಮುಖಂಡ ಸಂಗಣ್ಣ ಓಲೇಕಾರ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT