ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪಂದನೆ, ಸ್ವಾಲಂಬನೆಗೆ ಮತ್ತೊಮ್ಮೆ ಮೋದಿ ಸರ್ಕಾರ: ಶಾಸಕ ಸಿದ್ದು ಸವದಿ

Published 3 ಮೇ 2024, 13:46 IST
Last Updated 3 ಮೇ 2024, 13:46 IST
ಅಕ್ಷರ ಗಾತ್ರ

ರಬಕವಿ ಬನಹಟ್ಟಿ: ಸ್ಪಂದನೆ ಮತ್ತು ಸ್ವಾವಲಂಬನೆಗಾಗಿ ಮತ್ತೊಮ್ಮೆ ಮೋದಿ ಸರ್ಕಾರ ಅಗತ್ಯವಾಗಿದೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.

ಶುಕ್ರವಾರ ನಗರದ ವಿವಿಧ ವಾರ್ಡ್‌ಗಳಲ್ಲಿ ಲೋಕಸಭಾ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಪರವಾಗಿ ಪ್ರಚಾರ ನಡೆಸಿ ಅವರು ಮಾತನಾಡಿದರು.

‘ಗ್ರಾಮೀಣ ಜನರ ಆರೋಗ್ಯ ರಕ್ಷಣೆಗಾಗಿ ಆಯುಷ್ಮಾನ್ ಭಾರತ, ಶುದ್ಧ ಕುಡಿಯುವ ನೀರಿಗಾಗಿ ಜಲಜೀವನ್ ಯೋಜನೆ, ಕಡಿಮೆ ದರದಲ್ಲಿ ಜನೌಷಧಿ ಕೇಂದ್ರ, ಪ್ರಧಾನ ಮಂತ್ರಿ ಮುದ್ರಾ ಯೋಜನೆ, ಪ್ರಧಾನ ಮಂತ್ರಿ ಆವಾಸ ಯೋಜನೆ ಮೂಲಕ ಬಡವರಿಗೆ ಮೂರು ಕೋಟಿ ಮನೆಗಳ ನಿರ್ಮಾಣ, ಜನಧನ ಯೋಜನೆ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆ, ಸ್ವಚ್ಛ ಭಾರತ ಯೋಜನೆ ಸೇರಿಂತೆ ಹತ್ತಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಭಾರತೀಯರ ಅಭಿವೃದ್ಧಿಗಾಗಿ ಮತ್ತೊಮ್ಮೆ ಮೋದಿ ಸರ್ಕಾರ ಅಗತ್ಯವಾಗಿದೆ’ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಸಂಜಯ ತೆಗ್ಗಿ, ಧರೆಪ್ಪ ಉಳ್ಳಾಗಡ್ಡಿ, ಮಹಾದೇವ ಕೊಟ್ಯಾಳ, ಯಲ್ಲಪ್ಪ ಕಟಗಿ, ಜಯಪ್ರಕಾಶ ಸೊಲ್ಲಾಪುರ, ಅಶೋಕ ಕುಚನೂರ ದಾನಪ್ಪ ತುಂಗಳ, ಬಸವರಾಜ ಮನ್ಮಿ, ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT