ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈ–ಕ ವಿಮೋಚನಾ ದಿನಾಚರಣೆ: ಅಸಮತೋಲನ ನಿವಾರಣೆಗೆ ಯತ್ನ- ಡಿ.ಸಿ

Last Updated 17 ಸೆಪ್ಟೆಂಬರ್ 2018, 10:12 IST
ಅಕ್ಷರ ಗಾತ್ರ

ಬಳ್ಳಾರಿ: 'ಹೈದರಾಬಾದ್ ಕರ್ನಾಟಕ ಪ್ರದೇಶದ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಸಂವಿಧಾನದ 371(ಜೆ) ಅನ್ವಯ ವಿಶೇಷ ಸ್ಥಾನಮಾನ ಕಲ್ಪಿಸಲಾಗಿದ್ದು, ಅದರನ್ವಯ ಹೈ–ಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ವಿ.ರಾಮ್‌ಪ್ರಸಾದ್‌ ಮನೋಹರ್‌ ಹೇಳಿದರು.

ನಗರದ ಮುನ್ಸಿಪಲ್ ಕಾಲೇಜು ಮೈದಾನದ ಆವರಣದಲ್ಲಿ ಸೋಮವಾರ ಹೈ–ಕ ವಿಮೋಚನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಹೈ–ಕ ಅಭಿವೃದ್ಧಿಗಾಗಿಯೇ ರಾಜ್ಯ ಸರ್ಕಾರ ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ನೀಡುತ್ತಿದೆ’ ಎಂದರು.

‘371(ಜೆ) ಜಾರಿಯಿಂದ ಉದ್ಯೋಗ, ಶಿಕ್ಷಣದಲ್ಲಿ ವಿಶೇಷ ಮೀಸಲಾತಿ ಸೌಲಭ್ಯ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ’ ಎಂದರು.

ಹೋರಾಟಗಾರರ ಸ್ಮರಣೆ: ‘ಸರ್ದಾರ್ ವಲ್ಲಭಬಾಯಿ ಪಟೇಲ್ ಅವರಂಥ ದಿಟ್ಟ ನಾಯಕರ ಹೋರಾಟದ ಫಲವಾಗಿಯೇ ಹಲವು ಪ್ರಾಂತ್ಯಗಳು ಭಾರತ ದೇಶಕ್ಕೆ ಸೇರ್ಪಡೆಯಾದವು’ ಎಂದರು.

’ಜಿಲ್ಲಾಡಳಿತವು ಮಹಿಳಾ ಮತ್ತು ವಿದ್ಯಾರ್ಥಿಗಳ ಸಬಲೀಕರಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ₹ 108 ಕೋಟಿ ವೆಚ್ಚದಲ್ಲಿ ಬಳ್ಳಾರಿಯಲ್ಲಿ ಮೆಗಾ ಡೈರಿ ಸ್ಥಾಪನೆ, ₹ 1,368 ಕೋಟಿ ವೆಚ್ಚದಲ್ಲಿ ಬಳ್ಳಾರಿಗೆ ತುಂಗಾಭದ್ರಾ ಜಲಾಶಯದಿಂದ ನೇರವಾಗಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ’ ಎಂದರು.

‘₹ 15,274 ಕೋಟಿ ಮಂಜೂರು’:ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಮೂಲಕ ಜಿಲ್ಲಾಡಳಿತ ಸಲ್ಲಿಸಿದ ಕ್ರಿಯಾಯೋಜನೆಯಲ್ಲಿ ₹ 15,274 ಕೋಟಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌ ಮಂಜೂರು ಮಾಡಿಸಿದ್ದಾರೆ’ ಎಂದು ಜಿಲ್ಲಾಧಿಕಾರಿ ಹೇಳಿದರು.
‘ ಆರೋಗ್ಯ, ಶಿಕ್ಷಣ, ಪರಿಸರ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗಾಗಿ ಹಣವನ್ನು ಮೀಸಲಿರಿಸಲಾಗಿದೆ’ ಎಂದರು.

ಹೈ–ಕ ಹೋರಾಟ ಸಮಿತಿ ಅಧ್ಯಕ್ಷ ಸಿರಿಗೆರೆ ಪನ್ನರಾಜ್, ವಿಮೋಚನೆಯ ಇತಿಹಾಸ ಹಾಗೂ ಬಳ್ಳಾರಿಯ ಪಾತ್ರ ಕುರಿತು ಉಪನ್ಯಾಸ ನೀಡಿದರು. ಶಾಸಕ ಜಿ.ಸೋಮಶೇಖರರೆಡ್ಡಿ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮೇಯರ್ ಸುಶೀಲಾಬಾಯಿ, ಉಪಮೇಯರ್ ಲಕ್ಷ್ಮೀದೇವಿ, ಪಾಲಿಕೆ ಸದಸ್ಯರಾದ ಜಿ.ವೆಂಕಟರಮಣ, ಶ್ರೀನಿವಾಸ ಮೋತ್ಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT