ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಕರ್ಣ ಮಹಾಬಲೇಶ್ವರ ದೇಗುಲಕ್ಕೆ ಕಾರ್ಯನಿರ್ವಾಹಕ ಅಧಿಕಾರಿ ನೇಮಕ

Last Updated 29 ಆಗಸ್ಟ್ 2018, 14:22 IST
ಅಕ್ಷರ ಗಾತ್ರ

ಬೆಂಗಳೂರು: ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೆ ಕೆ.ಎ.ಎಸ್‌ ಅಧಿಕಾರಿ ಎಚ್‌.ಹಾಲಪ್ಪ ಅವರನ್ನು ಕಾರ್ಯ ನಿರ್ವಾಹಕ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆ ಕಮಿಷನರ್‌ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಹಾಲಪ್ಪ ಅವರು ಸದ್ಯ ಕೊಲ್ಲೂರು ಮೂಕಾಂಬಿಕಾ ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಹೆಚ್ಚುವರಿಯಾಗಿ ಗೋಕರ್ಣ ದೇವಾಲಯದ ಹೊಣೆಯನ್ನೂ ಅವರಿಗೆ ನೀಡಲಾಗಿದೆ. ಜಿಲ್ಲಾಧಿಕಾರಿಗಳ ಮೇಲುಸ್ತುವಾರಿಯಲ್ಲಿ ಹಾಲಪ್ಪ ಕಾರ್ಯ ನಿರ್ವಹಿಸಲಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನಲ್ಲಿರುವ ಪ್ರಸಿದ್ಧ ಗೋಕರ್ಣ ದೇವಾಲಯವನ್ನು ಅಂದಿನ ರಾಜ್ಯ ಸರ್ಕಾರ 2008ರ ಆಗಸ್ಟ್‌ 12ರಂದು ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿತ್ತು. ‘ಸರ್ಕಾರದ ಈ ಕ್ರಮ ಕಾನೂನು ಬಾಹಿರ’ ಎಂದು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಪ್ರಶ್ನಿಸಲಾಗಿತ್ತು.

ಈ ಕುರಿತಂತೆ 2018ರ ಆಗಸ್ಟ್‌ 10ರಂದು ತೀರ್ಪು ನೀಡಿದ್ದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ‘ದೇಗುಲವನ್ನು ಪುನಃ ಸರ್ಕಾರದ ವಶಕ್ಕೆ ನೀಡಬೇಕು’ ಎಂದು ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT