ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆ. 12ಕ್ಕೆ ವಿಶ್ವ ಡೇರಿ ಶೃಂಗಸಭೆ

Last Updated 3 ಆಗಸ್ಟ್ 2022, 21:30 IST
ಅಕ್ಷರ ಗಾತ್ರ

ಬೆಂಗಳೂರು: ಅಂತರರಾಷ್ಟ್ರೀಯ ಡೇರಿ ಫೆಡರೇಷನ್‍ನ ‘ವಿಶ್ವ ಡೇರಿ ಶೃಂಗ ಸಭೆ’ ಸೆ.12ರಿಂದ 15ರವರೆಗೆ ದೆಹಲಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಈ ಶೃಂಗಸಭೆಯ ಪ್ರಾಯೋಜಕತ್ವವನ್ನು ಅಮೂಲ್‌ ಜತೆಯಲ್ಲಿಕರ್ನಾಟಕ ಸಹಕಾರಿ ಹಾಲು ಮಹಾಮಂಡಳಿ ಉತ್ಪಾದಕರ ಮಹಾಮಂಡಳಿ (ಕೆಎಂಎಫ್‌) ವಹಿಸಿಕೊಂಡಿದೆ.

ಈ ಶೃಂಗಸಭೆಗೆ ಪ್ರಪಂಚದಾದ್ಯಂತ ಸುಮಾರು 1500 ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಡೇರಿ ಸಂಸ್ಕರಣಾ ಕಂಪನಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಉದ್ಯೋಗಿಗಳು, ರೈತರು, ಡೇರಿ ಉದ್ಯಮಕ್ಕೆ ಪೂರೈಕೆದಾರರು, ಶಿಕ್ಷಣ ತಜ್ಞರು, ಸರ್ಕಾರಿ ಪ್ರತಿನಿಧಿಗಳು ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಆಸಕ್ತ ರೈತರು, ಶಿಕ್ಷಣ ತಜ್ಞರು ಮತ್ತು ಉದ್ಯಮಿಗಳು ಈ ಶೃಂಗಸಭೆಯಲ್ಲಿ ಪಾಲ್ಗೊಂಡು ಡೇರಿ ಉದ್ಯಮದ ಬಗ್ಗೆ ಮತ್ತಷ್ಟು ಮಾಹಿತಿ ಪಡೆದುಕೊಳ್ಳಬಹುದು ಎಂದು ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT