ಬರದ ನಾಡು ಎನಿಸಿರುವ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಜಲಪಾತದ ಸೊಬಗು ಎಲ್ಲರನ್ನೂ ಆಕರ್ಷಿಸುತ್ತಿದೆ. ತಾಲ್ಲೂಕಿನ ಪೋಶೆಟ್ಟಿಹಳ್ಳಿ ಬಳಿಯ ಶ್ರೀನಿವಾಸ ಸಾಗರ ಈಗ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಜಿಲ್ಲೆಯ ವಿವಿಧ ಭಾಗಗಳಿಂದಷ್ಟೇ ಅಲ್ಲ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯಿಂದಲೂ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.