ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಸ್ಥಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿ

Published 1 ಮೇ 2024, 15:26 IST
Last Updated 1 ಮೇ 2024, 15:26 IST
ಅಕ್ಷರ ಗಾತ್ರ

ಉಜಿರೆ (ದಕ್ಷಿಣ ಕನ್ನಡ): ಧರ್ಮಸ್ಥಳದಲ್ಲಿ ಬುಧವಾರ ನಡೆದ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹದಲ್ಲಿ 39 ಅಂತರ್ಜಾತಿಯ ಜೋಡಿ ಸೇರಿದಂತೆ ಒಟ್ಟು 123 ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಸಂಜೆ 6.45ರ ಗೋದೂಳಿ ಮುಹೂರ್ತದಲ್ಲಿ ವೇದಮಂತ್ರದೊಂದಿಗೆ ನಡೆದ ಮಂಗಳಸೂತ್ರ ಧಾರಣೆಗೆ ನೂರಾರು ಜನರು ಸಾಕ್ಷಿಯಾದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರು ಬೀಡಿನಲ್ಲಿ ವಧುವಿಗೆ ಸೀರೆ, ರವಿಕೆ ಮತ್ತು ವರನಿಗೆ ಧೋತಿ, ಶಾಲು ವಿತರಿಸಿದರು. ಸಂಜೆ 6 ಗಂಟೆಗೆ ವಧು– ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿ ಸಭಾಭವನದಲ್ಲಿ ಹಾಜರಾದರು. ವೀರೇಂದ್ರ ಹೆಗ್ಗಡೆ ದಂಪತಿ ಜೊತೆ ಚಿತ್ರ ನಟ ದೊಡ್ಡಣ್ಣ ದಂಪತಿ ಮಂಗಳ ಸೂತ್ರ ವಿತರಿಸಿದರು. ಆಯಾ ಜಾತಿ-ಮತ ಸಂಪ್ರದಾಯದಂತೆ ಧಾರ್ಮಿಕ ವಿಧಿಗಳನ್ನು ನಡೆಸಲಾಯಿತು.

ಧರ್ಮಸ್ಥಳದಲ್ಲಿ ನಡೆದ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಚಲನಚಿತ್ರ ನಟ ದೊಡ್ಡಣ್ಣ ಮತ್ತು ಪತ್ನಿ ಶಾಂತಾ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ. ಹೆಗ್ಗಡೆಯವರು ಮಂಗಳಸೂತ್ರ ವಿತರಿಸಿದರು
ಧರ್ಮಸ್ಥಳದಲ್ಲಿ ನಡೆದ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಚಲನಚಿತ್ರ ನಟ ದೊಡ್ಡಣ್ಣ ಮತ್ತು ಪತ್ನಿ ಶಾಂತಾ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ. ಹೆಗ್ಗಡೆಯವರು ಮಂಗಳಸೂತ್ರ ವಿತರಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT