ಭಾನುವಾರ, 2 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಬರಿಮಲೆಗೆ ತೆರಳಿದ್ದ 37 ವರ್ಷದ ವ್ಯಕ್ತಿ ಹೃದಯಾಘಾತದಿಂದ ಸಾವು!

Published 18 ಮೇ 2024, 14:41 IST
Last Updated 18 ಮೇ 2024, 14:41 IST
ಅಕ್ಷರ ಗಾತ್ರ

ಸುರತ್ಕಲ್: ಶಬರಿಮಲೆಗೆಂದು ತೆರಳಿದ್ದ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ ಶನಿವಾರ ನಿಧನರಾದರು.

ಶುಕ್ರವಾರ ಅವರ 10 ವರ್ಷದ ಮಗನ ಹರಕೆಯ ಸಲುವಾಗಿ ಮಗನ ಜತೆ ಶಬರಿಮಲೆಗೆ ತಂಡದೊಂದಿಗೆ ಹೊರಟಿದ್ದು, ಪಂಪಾ ಸ್ನಾನಘಟ್ಟದ ಬಳಿ ತೆರಳುವಾಗ ಹೃದಯಾಘಾತವಾಗಿದೆ.

ಕಾಟಿಪಳ್ಳ ನಿತ್ಯಾನಂದ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿಯಾಗಿ, ಕೇಸರಿ ಯುವಕ ಮಂಡಲದ ಪದಾಧಿಕಾರಿಯಾಗಿದ್ದರು. ನಿತ್ಯಾನಂದ ಕೆಟರರ್ಸ್‌ ಅನ್ನು ನಡೆಸುತ್ತಿದ್ದರು. ಅವರಿಗೆ ತಂದೆ, ತಾಯಿ, ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT