ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ತೂರು | ಅಕ್ಕನಿಗೆ ಲಿವರ್ ದಾನ ಮಾಡಿದ ತಂಗಿ: ಆದರೂ ಉಳಿಯಲಿಲ್ಲ ಪ್ರಾಣ

Published 25 ಜನವರಿ 2024, 15:42 IST
Last Updated 25 ಜನವರಿ 2024, 15:42 IST
ಅಕ್ಷರ ಗಾತ್ರ

ಪುತ್ತೂರು: ಲಿವರ್ ವೈಫಲ್ಯದಿಂದ ಬಳಲುತ್ತಿದ್ದ ಯುವತಿಯೊಬ್ಬರಿಗೆ ಅವರ ತಂಗಿಯೇ ಲಿವರ್ ದಾನ ಮಾಡಿ, ಅಕ್ಕನ ಜೀವ ಉಳಿಸಿಕೊಳ್ಳಲು ಮಾಡಿದ ಪ್ರಯತ್ನ ಕೊನೆಗೂ ಕೈಗೂಡಲಿಲ್ಲ. ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆ ಯುವತಿ ಬುಧವಾರ ಮೃತಪಟ್ಟಿದ್ದಾರೆ.

ನೆಹರೂನಗರದ ದಿವಂಗತ ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯಾ (29) ಮೃತಪಟ್ಟವರು. ಅವರು ಎಂಜಿನಿಯರಿಂಗ್ ಪದವೀಧರೆಯಾಗಿದ್ದರು. ಅವರಿಗೆ ತಾಯಿ, ತಂಗಿ ಇದ್ದಾರೆ.

‘ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಐಶ್ವರ್ಯಾ ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಲಿವರ್‌ಗೆ ಹಾನಿ ಆಗಿದ್ದು, ಕಸಿ ಚಿಕಿತ್ಸೆ ಮಾಡಿದರೆ ಮಾತ್ರ ಜೀವ ಉಳಿಸಿಕೊಳ್ಳಬಹುದು ಎಂದು ವೈದ್ಯರು ತಿಳಿಸಿದ್ದರು. ಅವರ ಚಿಕಿತ್ಸೆಗೆ ನೆರವು ಯಾಚಿಸಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹಾಕಲಾಗಿತ್ತು. ಐಶ್ವರ್ಯಾ ಅವರಿಗೆ ಸ್ವಂತ ಸಹೋದರಿಯೇ ಲಿವರ್ ದಾನ ಮಾಡಿದ್ದರು. ಆದರೂ ಅಕ್ಕನನ್ನು ಉಳಿಸಿಕೊಳ್ಳಲು ಕುಟುಂಬದವರಿಗೆ ಸಾಧ್ಯವಾಗಿಲ್ಲ’ ಎಂದು ಅವರು ಸಂಬಂಧಿಗಳು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT