ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯಕ್ರಮದಲ್ಲಿ ‘ಭಾರತ’ | ರಾಜ್ಯ ಸರ್ಕಾರ ಸಮಿತಿ ರಚಿಸಲಿ: ಬಸವರಾಜ ಹೊರಟ್ಟಿ

Published 26 ಅಕ್ಟೋಬರ್ 2023, 20:00 IST
Last Updated 26 ಅಕ್ಟೋಬರ್ 2023, 20:00 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಪಠ್ಯಕ್ರಮದಲ್ಲಿ ‘ಇಂಡಿಯಾ‘ ಬದಲು ‘ಭಾರತ’ ಎಂದು ಬದಲಾಯಿಸುವ ಕುರಿತು ರಾಜ್ಯ ಸರ್ಕಾರವೂ ಸಮಿತಿ ರಚಿಸಿ, ತೀರ್ಮಾನ ಕೈಗೊಳ್ಳಬೇಕು’ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಆಗ್ರಹಿಸಿದರು.

ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಇಂಡಿಯಾ ಬ್ರಿಟಿಷರು ಇಟ್ಟ ಹೆಸರು. ಭಾರತ ಎಂದು ಕರೆದರೆ ತಪ್ಪಲ್ಲ. ಪಠ್ಯಕ್ರಮದಲ್ಲಿ ಅಳವಡಿಸಿದರೂ ತಪ್ಪಲ್ಲ’ ಎಂದರು.

‘ತಜ್ಞರ ವರದಿ ಆಧರಿಸಿ ಕೇಂದ್ರ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ರಾಜ್ಯ ಸರ್ಕಾರ ಏಕಪಕ್ಷೀಯ ನಿರ್ಧಾರ ಮಾಡದೆ, ಸಮಿತಿ ರಚಿಸಿ, ವಿಸ್ತೃತ ಚರ್ಚೆ ನಡೆಸಲಿ. ತಜ್ಞರ ಶಿಫಾರಸು ಆಧರಿಸಿ ತೀರ್ಮಾನ ಕೈಗೊಳ್ಳಲಿ. ಇದರಲ್ಲಿ ರಾಜಕೀಯ ಬೇಡ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT