ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಾತಿ ವ್ಯವಸ್ಥೆ ನಿರ್ಮೂಲನೆಗೆ ಶ್ರಮಿಸಿದ ಬಸವಣ್ಣ’

Published 10 ಮೇ 2024, 15:12 IST
Last Updated 10 ಮೇ 2024, 15:12 IST
ಅಕ್ಷರ ಗಾತ್ರ

ಬ್ಯಾಡಗಿ: ಜಾತಿ ವ್ಯವಸ್ಥೆಯಿಂದ ಸಂಪೂರ್ಣವಾಗಿ ಮುಕ್ತರಾಗಬೇಕೆಂದು 12ನೇ ಶತಮಾನದಲ್ಲಿಯೇ ಜಗಜ್ಯೋತಿ ಬಸವಣ್ಣ ಸಾಮಾಜಿಕ ಸುಧಾರಣಾ ಕ್ರಾಂತಿಯನ್ನುಂಟು ಮಾಡಿದರು ಎಂದು ತಹಶೀಲ್ದಾರ್ ಪಟ್ಟರಾಜಗೌಡ್ರ ಹೇಳಿದರು.

ಇಲ್ಲಿಯ ತಹಶೀಲ್ದಾರ್‌ ಕಚೇರಿಯಲ್ಲಿ ತಾಲ್ಲೂಕು ಆಡಳಿತ ಶುಕ್ರವಾರ ಏರ್ಪಡಿಸಿದ್ದ ಜಗಜ್ಯೋತಿ ಬಸವೇಶ್ವರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಅಂಗವಾಗಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

‘ಸಮಾಜದಲ್ಲಿದ್ದ ಲಿಂಗ ತಾರತಮ್ಯವನ್ನು ಕೊನೆಗಾಣಿಸಿ ಹೆಣ್ಣು ಮಕ್ಕಳಿಗೂ ಶಿಕ್ಷಣ ನೀಡಬೇಕೆಂದು ಪ್ರತಿಪಾದಿಸಿದ ಮಹಾನ್‌ ಚೇತನ ಬಸವಣ್ಣ ಹಗಲಿರುಳು ಶ್ರಮಿಸಿದ್ದಾರೆ. ಅವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅವಳಡಿಸಿಕೊಂಡು ನಡೆಯಬೇಕು’ ಎಂದು ಹೇಳಿದರು.

ತಾ.ಪಂ ಇಒ ಕೆ.ಎಂ.ಮಲ್ಲಿಕಾರ್ಜುನ ಮಾತನಾಡಿ, ‘ಹೇಮರೆಡ್ಡಿ ಮಲ್ಲಮ್ಮ 14ನೇ ಶತಮಾನದ ಮಹಿಳಾ ಸಂತರಾಗಿದ್ದರು’ ಎಂದರು.

ಈ ವೇಳೆ ಪುರಸಭೆ ಮಾಜಿ ಅಧ್ಯಕ್ಷ ಮುರಿಗೆಪ್ಪ ಶೆಟ್ಟರ, ಮುಖಂಡರಾದ ಶಂಕರಗೌಡ ಪಾಟೀಲ, ಡಿ.ಎಚ್‌.ಬುಡ್ಡನಗೌಡ್ರ, ಸಂತೋಷ ಮೂಲಿಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಜಿ.ಕೋಟಿ, ಶಿರಸ್ತೇದಾರ ಹತ್ತಿಮತ್ತೂರು, ಶಶಿಧರಸ್ವಾಮಿ ಹಿರೇಮಠ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT