ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಶ್ರೇಯೋಭಿವೃದ್ಧಿಗೆ ಶಿಕ್ಷಣ ಅವಶ್ಯ: ಬೊಮ್ಮಾಯಿ

Published 31 ಜನವರಿ 2024, 4:16 IST
Last Updated 31 ಜನವರಿ 2024, 4:16 IST
ಅಕ್ಷರ ಗಾತ್ರ

ಸವಣೂರು: ವಿದ್ಯಾರ್ಥಿಗಳ ಭವಿಷ್ಯ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಶಿಕ್ಷಣ ಬಹಳ ಮುಖ್ಯವಾದ ಸಾಧನವಾಗಿದೆ ಎಂದು ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

ಪಟ್ಟಣದ ಶ್ರೀಮತಿ ಗಂಗಮ್ಮ ಎಸ್. ಬೊಮ್ಮಾಯಿ ಕಾನ್ವೆಂಟ್ ಸ್ಕೂಲ್‌ 13ನೇ ವಾರ್ಷಿಕೋತ್ಸವ ಹಾಗೂ ಶ್ರೀಮತಿ ಗಂಗಮ್ಮ ಎಸ್. ಬೊಮ್ಮಾಯಿ ಅವರ ಜನ್ಮದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯಾರು ಉನ್ನತ ಶಿಕ್ಷಣ ಪಡೆಯುತ್ತಾರೋ ಅವರಿಗೆ ಉತ್ತಮ ಭವಿಷ್ಯವಿದೆ. ಇಂದಿನದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಸಾಮಾನ್ಯ ಕೆಲಸವಲ್ಲ. ಸವಣೂರಿನಂತ ಊರಿನಲ್ಲಿ ಸಂಸ್ಥೆ ಪ್ರಾರಂಭಿಸಿ, ಉತ್ತಮ ಶಿಕ್ಷಣ ನೀಡುವುದೊಂದು ಸವಾಲಿನ ಕೆಲಸ. ಆದರೆ, ಸಂಸ್ಥೆಯ ಮುಖ್ಯಸ್ಥರಾದ ಶಿವಾನಂದ ಹಾಗೂ ಶಿಕ್ಷಕರ ತಂಡವು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಸವಣೂರಿನ ಜನತೆಯ ವಿಶ್ವಾಸ ಗಳಿಸಿ ಸಂಸ್ಥೆಯನ್ನು ಮುನ್ನಡೆಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಸವಣೂರಿನ ಯುವಕರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೌಶಲ ಆಧಾರಿತ ಶಿಕ್ಷಣ ನೀಡುವ ಸಂಸ್ಥೆಗಳಿಗೆ ಆಹ್ವಾನಿಸಿ ಈ ಭಾಗದ ಯುವಕರು ದೇಶ, ವಿದೇಶಗಳಲ್ಲಿ ಉನ್ನತ ಉದ್ಯೋಗ ಕೈಗೊಳ್ಳಲು ಅನುಕೂಲ ಕಲ್ಪಿಸಲಾಗುವುದು ಎಂದರು.

ಸಂಸ್ಥೆಯ ಅಧ್ಯಕ್ಷ ಶಿವಾನಂದ ಬೋರಶೆಟ್ಟಿ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಶೋಭಾ ನಿಸ್ಸೀಮಗೌಡ್ರ, ಕೆಸಿಸಿ ಬ್ಯಾಂಕಿನ ನಿರ್ದೇಶಕ ಎಸ್.ಎಂ. ಗಡೆಪ್ಪನವರ, ಬಿಜೆಪಿ ಸವಣೂರು ಮಂಡಳ ಅಧ್ಯಕ್ಷ ಗಂಗಾಧರ ಬಾಣದ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಬಿ.ಎಂ.ಪಾಟೀಲ, ಮುಖಂಡರಾದ ಶ್ರೀಕಾಂತ ದುಂಡಿಗೌಡ್ರ, ಸುರೇಶ ಗಾಣಿಗೇರ, ಮುರಳಿಧರ ಶೆಂಡಗೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಫ್. ಬಾರ್ಕಿ, ಸಂಸ್ಥೆಯ ಉಪಾಧ್ಯಕ್ಷ ವಿನಾಯಕ ಹಿರೇಮಠ, ಕಾರ್ಯದರ್ಶಿ ರಾಜಶೇಖರ ಗುರುಸ್ವಾಮಿಮಠ, ಸಂಸ್ಥೆಯ ಆಡಳಿತಾಧಿಕಾರಿ ಶಿವಯೋಗಿ ಆರಾಧ್ಯಮಠ, ಪವಮಾನ ನಾವಾವಳಿ ಇದ್ದರು.

ಶಿಕ್ಷಕಿಯರಾದ ಜ್ಯೋತಿ ನಾಮಾವಳಿ, ಶ್ರೀದೇವಿ ನೀಲಣ್ಣನವರ ಕಾರ್ಯಕ್ರಮ ನಿರ್ವಹಿಸಿದರು.

ಸವಣೂರು ಪಟ್ಟಣದ ಶ್ರೀಮತಿ ಗಂಗಮ್ಮ ಎಸ್. ಬೊಮ್ಮಾಯಿ ಕಾನ್ವೆಂಟ್ ಸ್ಕೂಲ್ 13ನೇ ವಾರ್ಷಿಕೋತ್ಸವ ಹಾಗೂ ಶ್ರೀಮತಿ ಗಂಗಮ್ಮ ಎಸ್. ಬೊಮ್ಮಾಯಿ ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು
ಸವಣೂರು ಪಟ್ಟಣದ ಶ್ರೀಮತಿ ಗಂಗಮ್ಮ ಎಸ್. ಬೊಮ್ಮಾಯಿ ಕಾನ್ವೆಂಟ್ ಸ್ಕೂಲ್ 13ನೇ ವಾರ್ಷಿಕೋತ್ಸವ ಹಾಗೂ ಶ್ರೀಮತಿ ಗಂಗಮ್ಮ ಎಸ್. ಬೊಮ್ಮಾಯಿ ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT